ಬಂಟ್ವಾಳ:ದ. ಕ. ಜಿ. ಪಂ., ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ದ. ಕ., ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಕೆ.ಎನ್. ಫೌಂಡೇಶನ್ ಬೆಂಗಳೂರು ಇವರ ಸಂಯುಕ್ತ ಬಂಟ್ವಾಳ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ 2026 ಕಾರ್ಯಕ್ರಮವು ಶನಿವಾರ ಮೊಡಂಕಾಪು ಇನ್ಸೆಂಟ್ ಜೀಸಸ್ ಚರ್ಚ್‌ನ ಅನುಗ್ರಹ ಸಭಾಂಗಣದಲ್ಲಿ ನಡೆಯಿತು.

ಬಂಟ್ಚಾಳ ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿಕುಂದರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಶಿಕ್ಷಕ,ಶಿಕ್ಷಕಿಯರು ದೇಶದ ಶಕ್ತಿಯಾಗಿದ್ದು,ವಿದ್ಯಾರ್ಥಿಗಳು ತಪ್ಪು ಮಾಡಿದಾಗ ಅವರನ್ನು ದಂಡಿಸುವುದಕ್ಕಿಂತ ತಪ್ಪಿನ ಅರಿವು ಮೂಡಿಸಿ ಸರಿಯಾದ ದಾರಿಯಲ್ಲಿ ಮುನ್ನಡೆಸುವುದು ಶಿಕ್ಷಕರ ನಿಜವಾದ ಕರ್ತವ್ಯವಾಗಿದೆ ಎಂದರು.
ತಾಲೂಕು ಮಟ್ಟದ 7 ಮಂದಿ ಉತ್ತಮ ಶಿಕ್ಷಕರಿಗೆ ಸನ್ಮಾನ:
ಈ ಸಂದರ್ಭ ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಅಳಿಕೆಮಜಲು ಸ. ಕಿ. ಪ್ರಾ. ಶಾಲೆಯ ಸಹಶಿಕ್ಷಕಿ ರಾಜೀವಿ ಕೆ., ಬರಿಮಾರು ಸ. ಹಿ. ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಉದಯ ಕುಮಾರ್,ಕಾವಳಪಡೂರು ಸ ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಹೆಲನ್ ಜುಲಿಯಾನ ಸಿಕ್ಕೇರಾ, ತುಂಬೆ ಕನ್ನಡ ಪ್ರೌಢಶಾಲೆಯ ಶಿಕ್ಷಕಿ ವಿದ್ಯಾಕೆ., ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಹರಿಪ್ರಸಾದ್,ಪಾಣೆಮಂ
ಅದೇರೀತಿ 2025-26 ರ ಸಾಲಿನ ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಬಾಬುನಾಯ್ಕ್ ನೀರ್ಕಾಜೆ, ಶಾಂತಿ ಲೀನಾ ಪಾಯಸ್ ,ಆದಂ ಸರಪಾಡಿ ಅವರನ್ನು ಗೌರವಿಸಲಾಯಿತು ಹಾಗೂ ಪ್ರಸ್ತುತ ಸಾಲಿನ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡಾಕ್ಷೇತ್ರದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯತು.
ಗೌರವ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದ ವೃತ್ತಿಯಾಗಿದೆ. ಸಮಾಜದ ಇತರ ವರ್ಗದ ವ್ಯಕ್ತಿಗಳು ತಪ್ಪು ಮಾಡಿದರೆ ಅದು ಕೆಲವೊಮ್ಮೆ ಗಮನಕ್ಕೆ ಬಾರದಿರಬಹುದು. ಆದರೆ ಶಿಕ್ಷಕರು ಮಾಡುವ ಸಣ್ಣ ತಪ್ಪು ಕೂಡ ಸಮಾಜದ ಗಮನಕ್ಕೆ ಬರುತ್ತದೆ. ಆದ್ದರಿಂದ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸಬೇಕು ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ,ಶಿಕ್ಷಕರು ಕೇವಲ ಪಠ್ಯಪುಸ್ತಕದ ಜ್ಞಾನವನ್ನು ನೀಡುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ, ಅವರಲ್ಲಿ ಆತ್ಮವಿಶ್ವಾಸ ಹಾಗೂ ಸಮಾಜದ ಬಗ್ಗೆ ಜವಾಬ್ದಾರಿಯುತ ಮನೋಭಾವ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕವಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಉತ್ತಮ ಗುಣ, ಶಿಸ್ತು, ದೇಶಪ್ರೇಮ, ಸಾಮಾಜಿಕ ಕಳಕಳಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಕಾರ್ಯ ಶಿಕ್ಷಕರಿಂದ ಆಗಬೇಕು ಎಂದರು.ತಹಶೀಲ್ದಾರ್ ಜಿ.ಮಂಜುನಾಥ್ ಶುಭಹಾರೈಸಿದರು.
ವೇದಿಕೆಯಲ್ಲಿ ಬಂಟ್ವಾಳ ಗ್ಯಾರಂಟಿ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಕೆ.ಎನ್.ಫೌಂಡೇಶನ್ ಚೇರ್ಮನ್ ರಾಜ್‌ಕೃಷ್ಣಮೂರ್ತಿ,ರುಪ್
ಇನ್ಸೆಂಟ್ ಜೀಸಸ್ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ವಿಕ್ಟರ್ ಡಿಸೋಜ, ಪಿ.ಎಂ. ಪೋಷಣ್ ಉಪಹಾರ ಯೋಜನೆ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ,ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಇನ್ಸೆಂಟ್ ಶಾಲೆಯ ಮುಖ್ಯ ಶಿಕ್ಷಕ ಮೆಲ್ವಿನ್ ಲೋಬೋ, ಬಂಟ್ವಾಳ ದೈಹಿಕ ಶಿಕ್ಷಣ ಪರಿವೀಕ್ಷಕ ಆಶಾ ನಾಯಕ್ ಬಂಟ್ವಾಳ ಕ್ಷೇತ್ರ ಸಮನ್ವಯಾಧಿಕಾರಿ ವಿದ್ಯಾ ಕುಮಾರಿ ಹಾಗೂ ವಿವಿಧ ಶಿಕ್ಷಕರ ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು. ಪ್ರಭಾರ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಸ್ವಾಗತಿಸಿದರು.

