ಬಂಟ್ವಾಳ: ದೇಶದ ಸಾಮಾನ್ಯ ಜನರ ನೋವು-ನಲಿವು ಹಾಗೂ ಸಂಕಷ್ಟಗಳಿಗೆ ತ್ವರಿತವಾಗಿ ಸ್ಪಂದಿಸುವುದರ ಜೊತೆಗೆ ಹಲವು ಜನಪರ ಯೋಜನೆಗಳನ್ನು ನೀಡಿದ ಹಿನ್ನೆಲೆ ಹೊಂದಿರುವ ಕಾಂಗ್ರೆಸ್‌ನ ಸಿದ್ಧಾಂತದತ್ತ ಯುವಜನತೆ ಮತ್ತೆ ಆಕರ್ಷಿತರಾಗುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು

ಕೊಯಿಲ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ  ನಡೆದ ‘ಭಾರತ್ ಜೋಡೋ’ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಾದ ಕೆ. ಪರಮೇಶ್ವರ ಪೂಜಾರಿ ರಾಯಿ, ಚಂದಪ್ಪ ಪೂಜಾರಿ ಮಾಬೆಟ್ಟು, ದೇವಕಿ ಕುದ್ಕೋಳಿ, ಪದ್ಮಾವತಿ ಕುದ್ಕೋಳಿ, ಸುನಿಲ್ ಬೈದಗುತ್ತು ಹಾಗೂ ರವಿರಾಜ್ ಹೋರಂಗಳ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಹಾಗೂ ಹಿರಿಯ ವಕೀಲ ಅಶ್ವನಿ ಕುಮಾರ್ ರೈ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ರಾಮ ಸ್ವರಾಜ್ ಪ್ರತಿಷ್ಠಾನ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಕೃಷಿಕ ಸಮಾಜ ಅಧ್ಯಕ್ಷ ಎಂ. ಪದ್ಮರಾಜ್ ಬಲ್ಲಾಳ್, ವಕೀಲೆ ಶೈಲಜಾ ರಾಜೇಶ್, ರಾಯಿ ವಲಯ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ದರ್ಭೆ, ಸಮಾನ ಮನಸ್ಕರ ಸಮಿತಿ ಅಧ್ಯಕ್ಷ ಮೋಹನ ಶೆಟ್ಟಿ ಪಂಜಿಕಲ್ಲು, ಪ್ರಚಾರ ಸಮಿತಿ ಅಧ್ಯಕ್ಷ ಲಾದ್ರು ಮಿನೇಜಸ್, ಗುತ್ತಿಗೆದಾರ ಎಂ.ಬಿ.ಆಶ್ರಫ್, ವಲಯ ಕಾಂಗ್ರೆಸ್ ಅಧ್ಯಕ್ಷ ಮೋಹನ ಪೂಜಾರಿ ರಾಯಿ, ಪ್ರಮುಖರಾದ ಕೆ.ಪಿ.ಲೋಬೋ, ಅನಿಲ್ ಕುಮಾರ್ ಪ್ರಭು, ಕೆ.ಎ.ಖಾದರ್, ಸೀತಾರಾಮ ಶಾಂತಿ, ದಿನೇಶ ಶೆಟ್ಟಿಗಾರ್, ನಾರಾಯಣ ಗೌಡ ಮೀಯಾಲು, ಸುಧೀರ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


ವಲಯ ಸಮಿತಿ ಕಾರ್ಯದರ್ಶಿ ರಾಮಚಂದ್ರ ಶೆಟ್ಟಿಗಾರ್ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಕೆ. ರಮೇಶ್ ನಾಯಕ್ ರಾಯಿ ವಂದಿಸಿದರು. ಸಂಯೋಜಕ ಜಗದೀಶ್ ಕೊಯಿಲ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *