ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಹಾಗೂ ಬಡಗಬೆಳ್ಳೂರು ಸರಕಾರಿ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆ ಇದರ ಸಂಯುಕ್ತಾಶ್ರಯದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.

ಬಡಗಬೆಳ್ಳೂರು ಒಕ್ಕೂಟ ದ ಅಧ್ಯಕ್ಷರಾದ ಚೈತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಶಾಲೆಯ ಮುಖ್ಯ ಶಿಕ್ಷಕರಾದ ಕೇಶವ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಕೃಷಿ ಅಧಿಕಾರಿ ಭಾಸ್ಕರ್ ಮಕ್ಕಳಿಗೆ ಪರಿಸರದ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಶಾಲಾ ಮಕ್ಕಳಿಗೆ ಪರಿಸರದ ಕುರಿತು ಸ್ಪರ್ಧೆಗಳನ್ನು ಏರ್ಪಡಿಸಿ,ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉಷಾ, ಒಕ್ಕೂಟದ ಉಪಾಧ್ಯಕ್ಷರಾದ ಕವಿತಾ, ಸೇವಾ ಪ್ರತಿನಿಧಿ ಸರಿತಾ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು
ಶಾಲಾ ಶಿಕ್ಷಕಿ ದಿವ್ಯಶ್ರೀ ಸ್ವಾಗತಿಸಿದರು.ಶಿಕ್ಷಕಿ ಕಮಲ ವಂದಿಸಿದರು.ವಲಯದ ಮೇಲ್ವಿಚಾರಕರಾದ ರೂಪ ಜೆ ರೈ ನಿರೂಪಿಸಿದರು
