ಬಂಟ್ವಾಳ: ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಂಟ್ವಾಳ ಕ್ಷೇತ್ರದ ಬಿಜೆಪಿ ಅಮ್ಟೂರು ಶಕ್ತಿ ಕೇಂದ್ರದ ವತಿಯಿಂದ ಮೋಗರ್ನಾಡು ಸಾವಿರ ಸೀಮೆಯ ಒಡೆಯನಾದ ಶ್ರೀ ನೀಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ವಿಶೇಷ ಮಹಾಪೂಜೆ,ನಿತ್ಯ ಪೂಜೆ, ರುದ್ರಾಭಿಷೇಕ, ಕುಂಕುಮಾರ್ಚನೆ ಯನ್ನು ನೆರವೇರಿಸಲಾಯಿತು.

ಬಿಜೆಪಿಯ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು ರವರ ನೇತೃತ್ವದಲ್ಲಿ ನಡೆದ ಈ ವಿಶೇಷ ಪೂಜೆಯ ಬಳಿಕ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣರಾವ್ ರವರು ಪ್ರಧಾನಿ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ ಉತ್ತಮ ಆಯುರಾರೋಗ್ಯ ಹಾಗೂ ದೇಶವನ್ನು ಮುನ್ನಡೆಸಲು ಅಪಾರ ಶಕ್ತಿಯನ್ನು ಭಗವಂತನು ಕರುಣಿಸಲಿ ಹಾಗೂ ದೇಶದ ಪ್ರಗತಿ, ಸುರಕ್ಷತೆ ಮತ್ತು ಪ್ರತಿಯೊಬ್ಬ ಪ್ರಜೆಯ ಕಲ್ಯಾಣಕ್ಕಾಗಿ ಅವರು ತೆಗೆದುಕೊಳ್ಳುವ ಪ್ರತಿ ನಿರ್ಧಾರಕ್ಕೂ ದೈವಿಕ ಮಾರ್ಗದರ್ಶನ ಹಾಗೂ ಆಶೀರ್ವಾದ ಸದಾ ಇರಲಿ ವಿಶ್ವಗುರು ಭಾರತದ ಕನಸು ನನಸಾಗಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಪ್ರಭಾಕರ ಶೆಟ್ಟಿ ಬೈದರಡ್ಕ , ಮಹಾಬಲ ಸಾಲಿಯನ್ ಮುಳಿಕೊಡಂಗೆ, ಶಕ್ತಿ ಕೇಂದ್ರದ ಪ್ರಮುಖರಾದ ಪ್ರವೀಣ್ ಕುಮಾರ್, ನವೀನ್ ಕೊಟ್ಟಾರಿ ,ಗಂಗಾಧರ ಕುಲಾಲ್ ,ಉಗ್ಗಪ್ಪ ಪೂಜಾರಿ, ಸೇಸಪ್ಪ ನಾಯ್ಕ್ ,ಧನಂಜಯ ಕುಮಾರ್ ,ನಾರಾಯಣ ಗಟ್ಟಿ ,ಸಂಜೀವ ನಾಯ್ಕ್ ,ವಿಜಯಕುಮಾರ್, ನಿಶಾಂತ್ ಡಿ ಅಮ್ಟೂರು ಮೊದಲಾದವರಿದ್ದರು.
