ಬಂಟ್ವಾಳ: ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಸಿಕೊಳುತ್ತಿದ್ದಾರೆ.

ಆಸ್ಪತ್ರೆಯಿಂದ ತಮ್ಮ ಆರೋಗ್ಯದ ಕುರಿತು ಪ್ರತಿಕ್ರಿಯಿಸಿರುವ ರಮಾನಾಥ ರೈ ಅವರು, “ದೇವರ ದಯೆಯಿಂದ, ಜನರ ಪ್ರಾರ್ಥನೆಯಿಂದ ನಾನು ಆರೋಗ್ಯವಾಗಿದ್ದೆನೆ ಎಂದು ತಿಳಿಸಿದ್ದಾರೆ.ಸೋಮವಾರ ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀಮೋಹನದಾಸ್ ಸ್ವಾಮೀಜಿ, ,ಸಂಸದ ಕ್ಯಾ.ಬ್ರಿಜೇಶ್ ಚೌಟ,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್,ಮಾಜಿ ವಿ.ಪ.ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಜಿಲ್ಲಾ ಪ್ರ.ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ,ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ಮೊದಲಾದವರು ಹಾಗೂ ಬಂಟ್ವಾಳ ತಾಲೂಕಿನ ಹಲವರು ಕಾಂಗ್ರೆಸ್ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ರಮಾನಾಥ ರೈ ಗಾಯಾಳುಗಳಾದ ಅವರ ಅಪ್ತಸಹಾಯಕ ಡೆಂಜಿಲ್,ಚಾಲಕನ ಅರೋಗ್ಯ ವಿಚಾರಿಸಿದರಲ್ಲದೆ, ಮಾಹಿತಿ ಪಡೆದುಕೊಂಡರು.ಶೀಘ್ರ ಗುಣಮುಖರಾಗುವಂತೆಯ ಹಾರೈಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ನೇರವಾಗಿ ಆಸ್ಪತ್ರೆಗೆ ತೆರಳಿ ರಮಾನಾಥ ರೈ ಹಾಗೂ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.
ಸಿಎಂ,ಕೆಪಿಸಿಸಿ ಅಧ್ಯಕ್ಷರಿಂದ ಕರೆ:
ಸೋಮವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧಗಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಮಾಜಿ ಸಚಿವ ರಮಾನಾಥ ರೈ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.ಭಾನುವಾರ ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿತ್ತು. ಘಟನೆಯಲ್ಲಿ ರಮಾನಾಥ ರೈ ಸೇರಿದಂತೆ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
