ಬಂಟ್ವಾಳ: 25ಸೆಂಟ್ಸ್ ವರೆಗಿನ (1000 ಚದರ ಮೀಟರ್ )ವಿನ್ಯಾಸ ಹಾಗೂ 9/11 ಮತ್ತು ಕಟ್ಟಡ ಲೈಸೆನ್ಸ್ ಅನುಮೋದನೆಗೆ ಗ್ರಾಮ ಪಂಚಾಯತ್ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರವನ್ನು ನೀಡಿ ಸರಕಾರ ಆದೇಶಿಸಿದೆ ಎಂದು ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರದ ಈ ಆದೇಶದಿಂದ ಗ್ರಾಮೀಣ ಜನತೆಗೆ ಅನುಕೂಲ ಮಾಡಿಕೊಟ್ಟಿದೆ ಎಂದು ತಿಳಿಸಿರುವ ಅವರು ರಾಜ್ಯದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ನಗರಾಭಿವೃದ್ಧಿ ಸಚಿವರಾದ ಯತಿಂದ್ರ ಸಿದ್ದರಾಮಯ್ಯ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ರವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ
