ಬಂಟ್ವಾಳ: ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ನ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕೋಟ್ಯಾನ್ ನರಿಕೊಂಬು ಆಯ್ಕೆಯಾಗಿದ್ದಾರೆ.

ಬಿ.ಸಿ.ರೋಡ್ನ ರಾಜ್ಯ ಸರಕಾರಿ ನೌಕರರ ಭವನದಲ್ಲಿ ನಡೆದ ಅಸೋಸಿಯೇಷನ್ನ ವಿಶೇಷ ಕಾರ್ಯಾಗಾರದಲ್ಲಿ ತೆರವಾಗಿದ್ದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸುರೇಶ್ ಕೋಟ್ಯಾನ್ ಅವರನ್ನು ಆಯ್ಕೆ ಮಾಡಿರುವುದಾಗಿ ಅಸೋಸಿಯೇಷನ್ ಅಧ್ಯಕ್ಷ ಪುಷ್ಪರಾಜ್ ಚೌಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುರೇಶ್ ಕೋಟ್ಯಾನ್ ಅವರ ಆಯ್ಕೆಗೆ ಅಸೋಸಿಯೇಷನ್ನ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದರು.
