ಬಂಟ್ವಾಳ :ಮಂಗಳೂರು- ಬೆಂಗಳೂರು ರಾ.ಹೆ.ಯ ಕಲ್ಲಡ್ಕ ಫ್ಲೈಓವರ್ ಮೇಲೆ ಜಾನುವಾರುಗಳನ್ನು ಅಕ್ರಮವಾಗಿ ಲಾರಿಯೊಂದರಲ್ಲಿ ಸಾಗಿಸುತ್ತಿರುವುದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪತ್ತೆಹಚ್ಚಿ,ಪೊಲೀಸರ ಸಹಕಾರದಲ್ಲಿ 24 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಲಾರಿಯೊಂದರಲ್ಲಿ ಮಾಣಿ ಕಡೆಯಿಂದ ಮಂಗಳೂರಿನತ್ತ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಕಲ್ಲಡ್ಕಪ್ಲೈಓವರ್ ಬಳಿ ಲಾರಿಯನ್ನು ಅನುಮಾನದಿಂದ ತಡೆದು ಪರಿಶೀಲಿಸಿದಾಗ ಜಾನುವಾರುಗಳನ್ನು ಕಟ್ಟಿಹಾಕಿರುವುದು ಪತ್ತೆಯಾಗಿದೆಯೆನ್ನಲಾಗಿದೆ.
ತಕ್ಷಣ ಬಂಟ್ವಾಳ ನಗರ ಠಾಣೆಯಪೊಲೀಸರಿಗೆ ಮಾಹಿತಿ ನೀಡಲಾಗಿದ್ದುಪೊಲೀಸರು ಸ್ಥಳಕ್ಕೆ ಧಾವಿಸಿ ಲಾರಿಯಲ್ಲಿದ್ದ 24 ಜಾನುವಾರುಗಳನ್ನು ರಕ್ಷಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕಾಮಿಸುವ ಹೊತ್ತಿಗೆ ಲಾರಿಯಲ್ಲಿದ್ದ ಮೂವರು ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆನ್ನಲಾಗಿದೆ.
ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ದನಗಳು ಎಲ್ಲಿಂದ ತರಲಾಗಿತ್ತು ಹಾಗೂ ಎಲ್ಲಿಗೆ ಕೊಂಡೊಯ್ಯ ಲಾಗುತ್ತಿತ್ತು ಎಂಬುದು ಪೊಲೀಸ್ ತನಿಖೆಯಿಂದಷ್ಠೆ ಗೊತ್ತಾಗಬೇಕಾಗಿದೆ.ಸಕಲೇಶ್ ಪುರ ಕಡೆಯಿಂದ ಜಾನುವಾರಗಳನ್ನು ಸಾಗಿಸಲಾಗುತ್ರಿರುವ ಬಗ್ಗೆ ವ್ಯಕ್ತವಾಗಿದೆ. ಈ ಕುರಿತು ಬಂಟ್ವಾಳ ನಗರ ಠಾಣಾ ಪೊಲೀಸರು ಕೇಸುದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.ವಶಪಡಿಸಲಾದ ಜಾನುವಾರುಗಳನ್ನು ಪಜೀರು ಗೋಶಾಲೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.
