ಬಂಟ್ವಾಳ : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಉಪಯುಕ್ತ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕಾರ್ಕಳದ ಎಂ.ಪಿ.ಎ.ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಪ್ರೊ. ವಿನಯ್ ಎಂ.ಎಸ್ ಹೇಳಿದರು. 
 
ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ವೇದಿಕೆಯನ್ನು ಉದ್ಘಾಟಿಸಿ  ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುವುದರೊಂದಿಗೆ ನೈತಿಕ ಮೌಲ್ಯಗಳಿಗೂ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
 
   ಸಮಾರಂಭದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಪ್ರೊ.ಅಜಕ್ಕಳ ಗಿರೀಶ್ ಭಟ್ ಮಾತನಾಡಿ, ವಿಭಿನ್ನ ರೀತಿಯ ಅಲೋಚನೆಗಳನ್ನು ಹೊಂದಿರುವ ಸಹಪಾಠಿಗಳು ಪರಸ್ಪರ ಸಹಕಾರದೊಂದಿಗೆ ಬೆಳೆಯುವಂತೆ ಪ್ರೇರೇಪಿಸುವುದು ವಿದ್ಯಾರ್ಥಿವೇದಿಕೆಯ ಪದಾಧಿಕಾರಿಗಳ ಜವಾಬ್ದಾರಿ ಎಂದು ತಿಳಿಸಿದರು.
 
 ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯರಾದ ಜಗದೀಶ ಕೊಯಿಲ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಹರಿಪ್ರಸಾದ್ ಬಿ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಜ್‌ಕುಮಾರ್, ಅಭಿವೃದ್ಧಿ ಸಮಿತಿಯ ಸೀತಾರಾಮ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ನಾರಾಯಣ್ ನಾಯಕ್ ವೇದಿಕೆಯಲ್ಲಿದ್ದರು. ಕು.ಅನನ್ಯ ಕಾರ್ಯಕ್ರಮ ನಿರ್ವಹಿಸಿದರು.

By Suddi9

Leave a Reply

Your email address will not be published. Required fields are marked *