ಬಂಟ್ವಾಳ: ಬಿ.ಮೂಡ ಗ್ರಾಮದ ಮೊಡಂಕಾಪು ರಾಜೀವ ಪಲ್ಕೆಯ ನಿವಾಸಿ ಕೃಷ್ಣ ಕುಲಾಲ್ ಅವರು ಶಂಭೂರಿನ ಎ.ಎಂ.ಆರ್. ಸಂಸ್ಥೆಯಿಂದ ಪಲ್ಲಮಜಲು ಗ್ರಿಡ್‌ಗೆ ವಿದ್ಯುತ್ ಸರಬರಾಜಿನ ಹೆಚ್.ಟಿ. ವಿದ್ಯುತ್ ತಂತಿ ತಗುಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಅವರ ಕುಟುಂಬಕ್ಕೆ ಎ.ಎಂ.ಆರ್. ಸಂಸ್ಥೆಯ ವತಿಯಿಂದ 5 ಲಕ್ಷ ರೂ.ಪರಿಹಾರ ಧನದ ಚೆಕ್ ವಿತರಿಸಲಾಯಿತು.

ಗುರುವಾರ ಬಂಟ್ವಾಳದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮೃತ ಕೃಷ್ಣ ಕುಲಾಲ್ ಅವರ ಕುಟುಂಬಕ್ಕೆ ಪರಿಹಾರದ ಚೆಕ್ ಮೂಲಕ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್,ಪ್ರ.ಕಾರ್ಯದರ್ಶಿ ಸುದರ್ಶನ್ ಬಜ, ನಿಕಟಪೂರ್ವ ಪುರಸಭಾ ಸದಸ್ಯ ಗೋವಿಂದ ಪ್ರಭು,ಬಿಜೆಪಿ ಮುಖಂಡರಾದ ಸುಲೋಚನಾ ಜಿ. ಕೆ ಭಟ್, ಹರಿಕೃಷ್ಣ ಬಂಟ್ವಾಳ್,ಮಚ್ಚೇಂದ್ರ ಸಾಲ್ಯಾನ್, ಕೇಶವ ದೈಪಲ , ದೇವಪ್ಪ ಪೂಜಾರಿ,ಮಾದವ ಮಾವೆ, ದಿನೇಶ್ ಅಮ್ಟೂರು ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
