ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮದಿನವನ್ನು  ಆಚರಿಸಲಾಯಿತು. 
 
 ಆರಂಭದಲ್ಲಿ ರಾಷ್ಡ್ರಪಿತ ಗಾಂಧೀಜಿ , ಲಾಲ್ ಬಹುದ್ದೂರ್ ಶಾಸ್ತ್ರೀ ಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬಳಿಕ  ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಂಡು ‘ಸ್ವಚ್ಚತೆಯೇ ಸೇವೆ’ ಎಂಬ ಸಂದೇಶವನ್ನು ಸಾರಿದರು. 
 
ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಜೀವನ , ಸರಳತೆ , ಸತ್ಯ , ಅಹಿಂಸೆ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ವಿದ್ಯಾರ್ಥಿಗಳು ಗಾಂಧಿ ತತ್ವಾದರ್ಶಗಳನ್ನು ಶಿಸ್ತು, ಸ್ವಚ್ಚತೆ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳ ಬೇಕೆಂದು ಶಾಲಾ ಮುಖ್ಯೋಪಾಧ್ಯಾಯರಾದ  ಹರಿಪ್ರಸಾದ್ ಕರೆ ನೀಡಿದರು.
 
ವಿದ್ಯಾರ್ಥಿಗಳಿಂದ ಭಾಷಣ , ದೇಶ ಭಕ್ತಿ ಗೀತೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.  ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ  ಚೈತ್ರ ಶೆಟ್ಟಿ, ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿಯಾದ  ವೀಣಾ  ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *