ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜ್ಞಾನವಿಕಾಸ ಯೋಜನೆಯ ವತಿಯಿಂದ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಪುತ್ತೂರು ಮತ್ತು ಪ್ರಸಾದ್ ನೇತ್ರಾಲಯ ಪುತ್ತೂರು ಇವರ ಸಹಯೋಗದಲ್ಲಿ ಉಚಿತ ನೇತ್ರ ಪರೀಕ್ಷೆ ಹಾಗೂ ಆರೋಗ್ಯ ತಪಾಸಣಾ ಶಿಬಿರವು ಬಂಟ್ವಾಳ ಉನ್ನತಿಸೌಧದಲ್ಲಿ ನಡೆಯಿತು

ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಗಳನ್ನು ಸುಲಭವಾಗಿ ದೊರಕಿಸುವ ನಿಟ್ಟಿನಲ್ಲಿ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.


ಶಿಬಿರದಲ್ಲಿ ತಜ್ಞ ವೈದ್ಯರಾದ ಡಾ. ಅನನ್ಯ, ಡಾ. ಪ್ರೇಮ್ ಅವರು ನೇತ್ರ ಹಾಗೂ ಆರೋಗ್ಯ ತಪಾಸಣೆ ನಡೆಸಿದರು. ಸಾರ್ವಜನಿಕರಿಗೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು  ಮಾರ್ಗದರ್ಶನ ನೀಡಲಾಯಿತು.ಜನಜಾಗೃತಿ ಸದಸ್ಯ ಸದಾನಂದ ನಾವೂರು, ಒಕ್ಕೂಟದ ಅಧ್ಯಕ್ಷ ಪದ್ಮನಾಭ ಗೌಡ, ಲಕ್ಷ್ಮಿ, ಸೇವಾ ಪ್ರತಿನಿಧಿಗಳಾದ ಉಷಾ ಹಾಗೂ ರೋಹಿಣಿ ಉಪಸ್ಥಿತರಿದ್ದರು.


ಜ್ಞಾನವಿಕಾಸ ಸಮನ್ವಯಾಧಿಕಾರಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು 

By Suddi9

Leave a Reply

Your email address will not be published. Required fields are marked *