ಬಂಟ್ವಾಳ: ಬರಿಮಾರು ಗ್ರಾಮದ ಕಾಗೆಕಾನ ಸಂಪರ್ಕ ರಸ್ತೆಯನ್ನು 30 ಲ.ರೂ. ವೆಚ್ಚದಲ್ಲಿ  ಅಭಿವೃದ್ಧಿ ಕಾಮಗಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭಾನುವಾರ ಚಾಲನೆ ನೀಡಿದರು.

ಬಳಿಕ ಸ್ಥಳೀಯರನ್ನುದ್ದೇಶಿಸಿ ಮಾತನಾಡಿದ ಶಾಸಕರು, ಗ್ರಾಮೀಣ ಭಾಗದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದು ನಮ್ಮ ಆದ್ಯತೆಯಾಗಿದೆ. ಉತ್ತಮ ರಸ್ತೆ ಸಂಪರ್ಕವು ಜನರ ದೈನಂದಿನ ಸಂಚಾರಕ್ಕೆ ಮಾತ್ರವಲ್ಲದೆ, ವಿದ್ಯಾರ್ಥಿಗಳು, ರೈತರು,  ಸಾರ್ವಜನಿಕರ ಅಗತ್ಯಗಳಿಗೂ ಮುಖ್ಯವಾಗಿದೆ. ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ ಅನುದಾನ ಒದಗಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ರಸ್ತೆ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.


ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಜಿನರಾಜ್ ಕೋಟ್ಯಾನ್, ಜಿಲ್ಲಾ ವಕ್ತಾರರಾದ ಮಾಧವ ಮಾವೆ, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಗಣೇಶ್ ಬುರ್ದು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದಿನರಾಜ್ ಹಾಗೂ ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷರಾದ ಸದಾಶಿವ ಜಿ. ಬರಿಮಾರು ಉಪಸ್ಥಿತರಿದ್ದರು.
ಬೂತ್ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

By Suddi9