ಬಂಟ್ವಾಳ: ಮೊಡಂಕಾಪು ಇನ್ಪೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿಗಳು, ಚಿತ್ರಕಲೆ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ನಡೆಸಲಾಯಿತು.
ಶಾಲಾ ಸಂಚಾಲಕರಾದ ಫಾದರ್ ವಿಕ್ಟರ್ ಡಿ’ಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಮೆಲ್ ಪ್ರೌಢಶಾಲೆಯ ರಾಜ್ಯ ಪ್ರಶಸ್ತಿ ವಿಜೇತ ವಿಜ್ಞಾನ ಶಿಕ್ಷಕ ರೋಷನ್ ಪಿಂಟೋ,  ಪೊಳಲಿ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಮುರಳೀಧರ ಆಚಾರ್ಯ ಅತಿಥಿಗಳಾಗಿ ಭಾಗವಹಿಸಿದ್ದರು

ಇನ್ಸೆಂಟ್ ಜೀಸಸ್ ಚರ್ಚಿನ ಸಹಾಯಕ ಧರ್ಮಗುರು ಫಾದರ್ ಪ್ರಮೋದ್ ಕ್ರಾಸ್ತಾ, ಶಾಲಾ ಮುಖ್ಯ ಶಿಕ್ಷಕ ಫಾದರ್ ಮೆಲ್ವಿನ್ ಲೋಬೋ, ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿಡೇನಿಯಲ್ ಡಿ’ಸಿಲ್ವಾ, ಸಹಾಯಕ ಮುಖ್ಯೋಪಾಧ್ಯಾಯಿನಿ ಗ್ಲಾಡಿಸ್ ಡಿ’ಸೋಜಾ ಉಪಸ್ಥಿತರಿದ್ದರು.

ಐದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅವುಗಳ ಕಾರ್ಯವೈಖರಿಯನ್ನು ವಿವರಿಸಿದರು. ವಿದ್ಯಾರ್ಥಿಗಳು ಸ್ವತಃ ತಯಾರಿಸಿದ ವಿವಿಧ ಕರಕುಶಲ ವಸ್ತುಗಳು ಹಾಗೂ ಚಿತ್ರಕಲೆಗಳು ಪ್ರದರ್ಶನದಲ್ಲಿ ಗಮನಸೆಳೆದವು.


ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕುಮಾರಿ ಸೀಹೋನ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ವರ್ಷಾ ಸ್ವಾಗತಿಸಿ, ಕುಮಾರಿ ಮಹೀರಾ ವಂದಿಸಿದರು. 

By Suddi9