ಬಂಟ್ವಾಳ: ಗೃಹಲಕ್ಷ್ಮೀ ಯೋಜನೆ ಅರ್ಜಿಗಳ ಮರುಪರಿಶೀಲನಾ ತರಬೇತಿ ಕಾರ್ಯಾಗಾರ ಬಿ.ಸಿ.ರೋಡಿನ ಸ್ತ್ರೀಶಕ್ತಿ ಸಭಾಭವನದಲ್ಲಿ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ತಾಲೂಕು ಪಂಚಾಯತ್ ಬಂಟ್ವಾಳ ಮತ್ತು ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ಸಹಯೋಗದೊಂದಿಗೆ ನಡೆದ ಕಾರ್ಯಾಗಾರದ ಅಧ್ಯಕ್ಷತೆಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ ಅವರು ಮಾತನಾಡಿ, ಪಂಚಗ್ಯಾರಂಟಿ ಪರಿಷ್ಕರಣೆ ವೇಳೆ ಅರ್ಹ ಫಲಾನುಭವಿಗಳು ಯಾರೂ ಬಿಟ್ಟುಹೋಗದಂತೆ ಗಮನಿಸಲು ಸಲಹೆ ನೀಡಿದರು.
ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆ ಪಂಚಗ್ಯಾರಂಟಿ ಯೋಜನೆಯ ಜನಪ್ರಿಯ ಯೋಜನೆ. ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು, ಯಾವುದೇ ಲೋಪವಾಗದಂತೆ ನಡೆದುಕೊಳ್ಳಬೇಕು ಎಂದರು.
ಬಂಟ್ವಾಳ ಸಿಡಿಪಿಒ ಮಲ್ತಾಜ್ ಗೃಹಲಕ್ಷ್ಮೀ ಯೋಜನೆಯ ಪ್ರಗತಿಯ ಮಾಹಿತಿ ನೀಡಿದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಚಂದ್ರಶೇಖರ ಆಚಾರ್ಯ ಕೊಯಿಲ, ಸಿರಾಜ್ ಮದಕ ಉಪಸ್ಥಿತರಿದ್ದರು.
ಸಿಡಿಪಿಒ ಇಲಾಖೆಯ ಮೇಲ್ವಿಚಾರಕಿ ನೀತಾಕುಮಾರಿ ಸ್ವಾಗತಿಸಿ, ಮೇಲ್ವಿಚಾರಕಿ ಗುಲಾಬಿ ವಂದಿಸಿದರು.
ಮೇಲ್ವಿಚಾರಕಿ ಶೋಭಾ ನಿರೂಪಿಸಿದರು.
