ಕೈಕಂಬ: ಶ್ರೀ ಮಹಮ್ಮಾಯಿ ದೇವಿ ಹಾಗೂ ಪರಿವಾರ ದೈವಗಳ ಕ್ಷೇತ್ರಕಂದಾವರ ಬಾಳಿಕೆಬೆಟ್ಟು ಪುನರ್ ಪ್ರತಿಷ್ಠೆ ಕಲಶಾಭಿಷೇಕದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ನ.8ರಂದು ಭಾನುವಾರ ಜರಗಲಿದೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ| ವೈ ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಇತರ ಗಣ್ಯರು ಹಾಗೂ ಪ್ರತಿಷ್ಠಾ ಮಹೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಬಾಗವಹಿಸಲಿದ್ದಾರೆ. ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ ಕಂದಾವರ ಇದರ ಸಭಾಭವನದಲ್ಲಿ ಬೆಳಿಗ್ಗೆ ಗಂಟೆ 10.00 ಗಂಟೆಗೆ ನಡೆಯಲಿದೆ ಎಂದು ಶ್ರೀ ಮಹಮ್ಮಾಯಿ ಸೇವಾ ಸಮಿತಿಯ ಪ್ರಕಟನೆ ತಿಳಿಸಿದೆ.
