ಬಂಟ್ವಾಳ: ಪ್ರಜಾ ಸೇವಾ ಕಾರ್ಯಕ್ರಮವು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅದಕ್ಕೆ ಸೂಕ್ತ ಪರಿಹಾರ ಒದಗಿಸಲು ಉತ್ತಮ ವೇದಿಕೆಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.

ಶನಿವಾರ ಮಂಚಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ‘ಪ್ರಜಾ ಸೇವಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸಬೇಕು. ಆದ್ದರಿಂದ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಪರಿಶೀಲಿಸಿ, ತ್ವರಿತವಾಗಿ ಪರಿಹಾರ ಒದಗಿಸಬೇಕು” ಎಂದು ಸೂಚಿಸಿದರು.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 75 ವಿವಿಧ ಅರ್ಜಿಗಳು ಹಾಗೂ ಅಹವಾಲುಗಳು ಸ್ವೀಕೃತಗೊಂಡವು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಿರಡ್ಡಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಶ್ವನಾಥ ಮುದಜ್ಜಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ವಂದಿಸಿದರು.
