ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಬೆಂಜನಪದವು ಶ್ರೀರಾಮನಗರದ ಕೇಶವ ಹಾಗೂ ವಿಮಲ ದಂಪತಿಗಳ ಪುತ್ರಿ ಕು| ದಿಶಾ ಅವರು ನಿಟ್ಟೆ ವಿಶ್ವವಿದ್ಯಾಲಯದ ಅಧೀನದ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ, ದೇರಳಕಟ್ಟೆ, ಮಂಗಳೂರು ಇಲ್ಲಿ ಬಿ.ಎಸ್ಸಿ. ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿ ಗಳಿಸುವುದರೊಂದಿಗೆ ಚಿನ್ನದ ಪದಕ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿನಿಯ ಈ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ನಿಟ್ಟೆ ವಿಶ್ವವಿದ್ಯಾಲಯವು ಅವರಿಗೆ ಪ್ರತಿಭಾಪ್ರಮಾಣಪತ್ರ ನೀಡಿ ಗೌರವಿಸಿದೆ.ದಿಶಾ ಅವರ ಈ ಸಾಧನೆಗೆ ಕುಟುಂಬಸ್ಥರು, ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ
