ಗುರುಪುರ : ಬಿಲ್ಲವ ಸಮಾಜ ಸೇವಾ ಸಂಘ(ರಿ) ಗುರುಪುರ ಇಲ್ಲಿ ನ. ೭ರಂದು ಕೊನೆಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ೨೧೪೪ನೇ ಮದ್ಯವರ್ಜನ ಶಿಬಿರದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್(ರಿ) ಬಜಪೆ ತಾಲೂಕಿನ ಗುರುಪುರ ವಲಯದ ನೂತನ ಸಿರಿ ನವಜೀವನ ಸಮಿತಿ ಉದ್ಘಾಟಿಸಲಾಯಿತು.

ಸಮಾರಂಭದಲ್ಲಿ ಗುರುಪುರ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಹಾಬಲ ಅಮೀನ್, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಕೋಟ್ಯಾನ್ ಬರಿಪಟ್ಲ, ಸಂಘದ ನಿಕಟಪೂರ್ವ ಕಾರ್ಯದರ್ಶಿ ಯೋಗೀಶ್, ಸಂಘಟನಾ ಕಾರ್ಯದರ್ಶಿ ಸುರೇಶ್ ಎನ್., ವಲಯ ಸೇವಾ ಪ್ರತನಿಧಿಗಳು, ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ಸುರೇಶ್ ನಿರೂಪಿಸಿದರು. ಸೇವಾ ಪ್ರತಿನಿಧಿ ಹರಿಣಾಕ್ಷಿ ಅವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಸೇವಾ ಪ್ರತಿನಿಧಿ ಶೋಭಾ ಧನ್ಯವಾದ ಅರ್ಪಿಸಿದರು.

By Suddi9