ಬಂಟ್ವಾಳ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ವತಿಯಿಂದ ನೀಡಲಾಗುತ್ತಿರುವ ಪ್ರತಿಷ್ಠಿತ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿಗೆ ಮಾಜಿ ಶಾಸಕ ಹಾಗೂ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ ಅವರಿಗೆ ಒಲಿದಿದೆ.

ರಾಜ್ಯದ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಹಕಾರಿ ಸಂಸ್ಥೆಗಳ ಮೂಲಕ ಜನರಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.
ಕೆ. ಪದ್ಮನಾಭ ಕೊಟ್ಟಾರಿ ಅವರು ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಸಹಕಾರಿ ಕ್ಷೇತ್ರದ ಬೆಳವಣಿಗೆ ಹಾಗೂ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಲ್ಲದೆ ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ವಿಟ್ಲ ಕ್ಷೇತ್ರದ ಮಾಜಿ ಶಾಸಕರಾಗಿರುವ ಅವರು ಹಲವು ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದು,ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ.
ನ. 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಕೆ. ಪದ್ಮನಾಭ ಕೊಟ್ಟಾರಿ ಅವರು ರಾಜ್ಯ ಸಹಕಾರಿ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ರವೀಂದ್ರ ಕಂಬಳಿ,ರಾಜಾರಾಮ ಭಟ್ ಈ ಬಾರಿ ಪದ್ಮನಾಭ ಕೊಟ್ಟಾರಿ ಹೀಗೆ ನಿರಂತರವಾಗಿ ಬಂಟ್ವಾಳ ತಾಲೂಕಿ ಹಿರಿಯ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಲಭಿದುತ್ತಿದ್ದು,ಸಹಕಾರಿಗಳಲ್ಲಿ ಸಂತಸವನ್ನು ತಂದಿದೆ.
