ಬಂಟ್ವಾಳ : ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಮಕ್ಕಳ ದಿನಾಚರಣೆ ನಡೆಸಲಾಯಿತು.ಮಿನಿ ಲೈಬ್ರರಿ ರಿಕ್ಷಾ ಖ್ಯಾತಿಯ ಚಾಲಕ ಮತ್ತು ಮಾಲಕರಾದ ಸುಶಾಂತ್ ಬಿ. ಸಿ. ರೋಡ್ ರವರು ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಮಕ್ಕಳು ದೇಶದ ಸಂಪತ್ತು ಸಂಸ್ಕಾರದ ಜೊತೆಗೆ ಶಿಸ್ತು ಮಾನವೀಯತೆ ಸಹಕಾರ ಮತ್ತು ದೇಶಪ್ರೇಮದ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಚಿತ್ರಕಲಾ ಶಿಕ್ಷಕರಾದ ನಿಟಿಲಾಕ್ಷ ಹಾಗೂ ಕೀತ೯ನಾ ದಂಪತಿಗಳು ರಾಜ್ಯಮಟ್ಟದ ವರ್ಣೋತ್ಸವ 2026 ಸ್ಪರ್ಧೆಯಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.ಕಲ್ಲಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ದೈಹಿಕ ಶಿಕ್ಷಕರಾದ ಇಂದುಶೇಖರ್ , ಶಿಕ್ಷಕ ತೌಸೀಫ್ ಅಹ್ಮದ್ ರವರು ಮಕ್ಕಳಿಗೆ ತರಗತಿವಾರು ವಿವಿಧ ಆಟೋಟ ಸ್ಪರ್ಧೆಗಳನ್ನು ನೆರವೇರಿಸಿ ಬಹುಮಾನವನ್ನು ವಿತರಿಸಲಾಯಿತು.ಸಿಹಿ ವಿತರಿಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಸಂಭ್ರಮಿಸಿದರು.
ಶಿಕ್ಷಕರು ಹಾಡನ್ನು ರಚಿಸಿ ಹಾಡಿ ಮಕ್ಕಳ ಜೊತೆ ನೃತ್ಯ ಮಾಡುವ ಮೂಲಕ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಸಂಭ್ರಮಿಸಿದರು.
ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿ, ಹಿರಿಯ ಶಿಕ್ಷಕಿ ಸಂಗೀತ ಶರ್ಮಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಹ ಶಿಕ್ಷಕರು ಸಹಕರಿಸಿದರು.
