ಬಂಟ್ವಾಳ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ, ವಿವೇಕಾನಂದ ಸೆಂಟ್ರಲ್ ಸ್ಕೂಲ್, ಪುತ್ತೂರು ಇವರ ಸಂಯುಕ್ತಾಶ್ರಯದಲ್ಲಿ ಪುತ್ತೂರು ಬಾಲವನ ಈಜುಕೊಳದಲ್ಲಿ ನಡೆದ 37ನೇ ರಾಷ್ಟ್ರೀಯ ಈಜು ಚಾಂಪಿಯನ್ ಶಿಪ್ ನ 14ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ಯ 8 ನೇ ತರಗತಿಯ ವಿದ್ಯಾರ್ಥಿನಿ ಅನನ್ಯ ಎ ಆರ್ 200 ಮೀಟರ್ ಬಟರ್ ಫ್ಲೈ ಮತ್ತು 100 ಮೀಟರ್ ಬ್ಯಾಕ್ ಸ್ಟ್ರೋಕ್ ಬೆಳ್ಳಿ ಪದಕ ಪಡೆದು ಅಸ್ಸಾಂ ನಲ್ಲಿ ನಡೆಯಲಿರುವ ಸ್ಕೂಲ್ ಗೇಮ್ ಫೆಡರೇಷನ್ ಆಫ್ ಇಂಡಿಯಾ ಈಜು ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವಳು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ ಪೆಕ್ಟರ್ ಬಿ. ಕೆ ನಾಯ್ಕ್,ಉಮೇಶ್ ವಿಟ್ಲ ಮತ್ತು ಅಶೋಕ್ ದೇವಾಡಿಗ ಇವರ ಶಿಷ್ಯೆ ಯಾಗಿದ್ದು ಅಲೋಶಿಯಸ್ ಈಜು ಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಮತ್ತು ತರಬೇತುದಾರರಾದ ಸಂಜಯ್ ಮತ್ತು ಗಗನ್ ರವರಿಂದ ತರಬೇತಿ ಪಡೆಯುತ್ತಿದ್ದಾರೆ.ಈಕೆ ಅಶೋಕ್ ಕುಮಾರ್ ಬರಿಮಾರು ಮತ್ತು ರೋಹಿಣಿ. ಬಿ ಯವರ ಪುತ್ರಿಯಾಗಿದ್ದಾಲಕೆ.

By Suddi9