ಬಂಟ್ವಾಳ: ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಪ್ರಯುಕ್ತ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆ,  ನರ್ಸಿಂಗ್ ಕಾಲೇಜು, ತುಂಬೆ ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಎರಡು ದಿನಗಳ‌ರಕ್ತದಾನ ಶಿಬಿರಕ್ಕೆ ಗುರುವಾರ ಚಾಲನೆ ನೀಡಲಾಯಿತು.


ಬಂಟ್ವಾಳ  ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ದೀಪ ಬೆಳಗಿಸಿ ಶಿಬರವನ್ನು  ಉದ್ಘಾಟಿಸಿ ಮಾತನಾಡಿ, ರಕ್ತದಾನವು ಸಮಾಜದ ಮೇಲಿನ ನಮ್ಮ ಮಾನವೀಯ ಜವಾಬ್ದಾರಿಯ ಪ್ರತೀಕವಾಗಿದೆ. ರಕ್ತದಾನದ ಮೂಲಕ ಅನೇಕ ಅಮೂಲ್ಯ ಜೀವಗಳನ್ನು ಉಳಿಸುವುದರ ಜೊತೆಗೆ ಸಮಾಜದಲ್ಲಿ ಪರಸ್ಪರ ಸಹಕಾರ ಮತ್ತು ಸೇವಾ ಮನೋಭಾವವನ್ನು ಬೆಳೆಸಬಹುದು. ಪ್ರತಿಯೊಬ್ಬ ಅರ್ಹ ವ್ಯಕ್ತಿಯೂ ಸ್ವಯಂಪ್ರೇರಿತ ರಕ್ತದಾನಕ್ಕೆ ಮುಂದಾಗಬೇಕು ಎಂದರು.


ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ರೈ,ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಶೆಟ್ಟಿ ಅವರು ಕಾತಿಥಿಗಳಾಗಿ ಭಾಗವಹಿಸಿದ್ದರು.


25ಕ್ಕೂ ಹೆಚ್ಚು ಬಾರಿ ರಕ್ತದಾನಗೈದ  ರಾಯ್ಸ್ ಡಿಸೋಜಾ ಹಾಗೂ ವಿಲ್ಸನ್ ಜೋಯೆಲ್ ಅವರನ್ನು ಸನ್ಮಾನಿಸಲಾಯಿತು.ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು, ತುಂಬೆಯ ಪ್ರಿನ್ಸಿಪಾಲ್ ಡಾ. ರೀನಾ ವಿಲ್ಮಾ ಫ್ರಾಂಕ್ ಅವರು ಪ್ರಸ್ತಾವಿಸಿ,ಸ್ವಾಗತಿಸಿದರು.
ಶುಕ್ರವಾರವು ಶಿಬಿರ ನಡೆಯಲಿದೆ. 

By Suddi9