ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ತಾಲೂಕು ಮಟ್ಟದ ಭಕ್ತ ಕನಕದಾಸ ಜಯಂತಿಯನ್ನು ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಆಚರಿಸಲಾಯಿತು.

ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರ ನಾಥ್ ಮಿತ್ತೂರುದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಾವುದೇ ವಿಶೇಷ ಜ್ಞಾನಗಳ ಅಗತ್ಯವಿಲ್ಲದೇ ಕೇವಲ ಭಕ್ತಿಯ ಮೂಲಕ ದೇವರನ್ನು ಒಲಿಸಿಕೊಳ್ಳಬಹುದು ಎಂಬುದಕ್ಕೆ ನಿದರ್ಶನವಾದವರು ಕನಕದಾಸರು. ದಾಸ ಸಾಹಿತ್ಯಕ್ಕೆ ಅವರ ಕೊಡುಗೆ ಮಹತ್ತರವಾದದ್ದು. ಕನಕನ ಕಿಂಡಿಯು ಕನಕದಾಸರ ವ್ಯಕ್ತಿತ್ವದ ಮಹತ್ವವನ್ನು ಸಾರಿ ಹೇಳುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ಪ್ರತೀಶ್ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರುಉಪಸ್ಥಿತರಿದ್ದರು.ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಸ್ವಾಗತಿಸಿ ವಂದಿಸಿದರು.
