ಬಂಟ್ವಾಳ: ವಕೀಲರ ಸಂಘ (ರಿ.) ಬಂಟ್ವಾಳ ಇದರ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಸಂಘದ ಸಭಾಂಗಣದಲ್ಲಿ ಆಚರಿಸಲಾಯಿತು.

ಬೆಳ್ತಂಗಡಿಯ ಹಿರಿಯ ನ್ಯಾಯವಾದಿ ಧನಂಜಯ್ ಬಿ.ಕೆ. ಅವರು ಅಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಭಾರತದ ಸಂವಿಧಾನದ ರಚನೆಯ ಇತಿಹಾಸ ಹಾಗೂ ಸಂವಿಧಾನ ರಚನಾ ಸಮಿತಿಯ ಸದಸ್ಯರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆನಗಲ್ ನರಸಿಂಹ ರಾವ್ ಅವರ ಕೊಡುಗೆಗಳ ಕುರಿತು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ. ವಹಿಸಿದ್ದರು.ಬಂಟ್ವಾಳದ ಹಿರಿಯ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ.ಪಿ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸೌಂದರ್ಯ ಎಂ., ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೋ, ಬಂಟ್ವಾಳ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ನರೇಂದ್ರನಾಥ ಭಂಡಾರಿ ಉಪಸ್ಥಿತರಿದ್ದರು.
ವಕೀಲರಾದ ಕೀರ್ತನ ಸ್ವಾಗತಿಸಿದರು. ಜಯಶ್ರೀ ವಂದಿಸಿದರು. ಆಶಾ ಕಾರ್ಯಕ್ರಮ ನಿರೂಪಿಸಿದರು. ಸಂಘದ ಹಿರಿಯ ಹಾಗೂ ಕಿರಿಯ ವಕೀಲರು ಉಪಸ್ಥಿತರಿದ್ದರು.
