ಬಂಟ್ವಾಳ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕು ಪುಂಜಾಲಕಟ್ಟೆ ವಲಯದ ಪಿಲಾತಬೆಟ್ಟು ಹಾಗೂ ನೈನಾಡು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಶ್ರೀ ವಿಷ್ಣು ಸಹಸ್ರ ನಾಮ ಅರ್ಚನೆ ಮಹಾಪೂಜೆ ಪುಂಜಾಲಕಟ್ಟೆ ಶ್ರೀ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಭಾನುವಾರ ನಡೆಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಆನಂದ್ ಸುವರ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಮೂಲಕ ನಡೆಯುವ ಕಾರ್ಯಕ್ರಮಗಳು ಜನರ ಹಾಗೂ ಸಮುದಾಯದ ಅಭಿವೃದ್ಧಿಗೆ ಸಹಕಾರಿಯಾಗಿದೆ.ಡಾ.ವೀರೇಂದ್ರ ಹೆಗ್ಗಡೆ ಯವರ ದೂರದೃಷ್ಟಿಯ ಯೋಜನೆಗಳು ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷರು ಹರೀಂದ್ರ ಟಿ.ಪೈ ವಹಿಸಿದ್ದರು.ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಹಾ ನಿರ್ದೇಶಕರಾದ ದಿನೇಶ್. ಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ,ಬಸವನಗುಡಿ ಬಸವೇಶ್ವರ ದೇವಸ್ಥಾನದ ಆಡಳಿತ ಸಮಿತಿಅಧ್ಯಕ್ಷರಾದ ಪ್ರಶಾಂತ್ ಪುಂಜಾಲಕಟ್ಟೆ,ಜನಜಾಗೃತಿ ವೇದಿಕೆ ಸದಸ್ಯ ಮೋಹನ್ ಸಾಲ್ಯಾನ್, ಶ್ರೀ ರಾಮ ಭಜನೆ ಮಂದಿರದ ಅಧ್ಯಕ್ಷ ಹರೀಶ್ ಶೆಟ್ಟಿ,ಪಿಲಾತಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ರಾಮಾಂಜನೇಯ ಭಜನಾ ಮಂಡಳಿ ಸಮಿತಿ ಅಧ್ಯಕ್ಷ ಧರ್ಣಪ್ಪ, ಪಿಲಾತ ಬೆಟ್ಟು ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಗಂಗಾಧರ್ ನೈನಾಡ್, ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮಿ, ಹಾಗೂ ನೂತನ ಒಕ್ಕೂಟದ ಅಧ್ಯಕ್ಷರಾದ ಶಶಿಧರ್ ನಾಯ್ಕ್ ಮತ್ತು ಲಾವಣ್ಯ ಉಪಸ್ಥಿತರಿದ್ದರು.
ಚಂದ್ರವತಿ ಅನಿಸಿಕೆ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಕಾರ್ಯಕ್ಷೇತ್ರದಲ್ಲಿ ಸ್ವ ಉದ್ಯೋಗ ಮಾಡಿ ಅಭಿವೃದ್ಧಿ ಹೊಂದಿದ ಸಮೀರಾ, ಸರೋಜ ಶೆಟ್ಟಿ, ಜಯಾನಂದ, ಪದ್ಮಾವತಿ ಅವರನ್ನು ಅಭಿನಂದಿಸಲಾಯಿತು,
ಪಿಲಾತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಘನ ತ್ಯಾಜ್ಯ ವಿಲೇವಾರಿ ವಾಹನ ಚಾಲಕಿ ಜಯಂತಿ ಹಾಗೂ ಸುವಿಧಾ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸಿದ ಶೋಭಾ , ರಾಂಕ್ ವಿದ್ಯಾರ್ಥಿ ಸುಶ್ಮಿತಾ, ಶೌರ್ಯ ಘಟಕ ಪ್ರತಿನಿಧಿ ಮೋಹನ್ ಸಾಲ್ಯಾನ್ ರವರನ್ನು ಗೌರವಿಸಲಾಯಿತು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಯನ್ನು ಹಸ್ತಾoತರಿಸಲಾಯಿತು
ಯೋಜನಾಧಿಕಾರಿ ಜಯಾನಂದ್ ಪಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಸವಿತಾ ವಂದಿಸಿದರು.ಸೇವಾಪ್ರತಿನಿಧಿ ಅಮೃತಾ ಕಾರ್ಯಕ್ರಮ ನಿರೂಪಿಸಿದರು.ವಿ ಎಲ್ ಇ ದಿವ್ಯ ಪಿಲಾತಬೆಟ್ಟು ,ನೈನಾಡು ಒಕ್ಕೂಟದ ಪದಾಧಿಕಾರಿಗಳು ಸಹಕರಿಸಿದರು.
