ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಬಡ್ಡಕಟ್ಟೆ ಭಗವಾನ್ ಶ್ರೀ ನಿತ್ಯಾನಂದ ಗೋವಿಂದ ಸ್ವಾಮೀಜಿ ಭಜನಾ ಮಂದಿರದಲ್ಲಿ ಜ.6ರಂದು ಬೆಳಿಗ್ಗೆ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಮತ್ತು ರಾತ್ರಿ ರಜತ ಪಲ್ಲಕಿ ಮೆರವಣಿಗೆ ಹಾಗೂ ನೇತ್ರಾವತಿ ನದಿಯಲ್ಲಿ ದೇವರ ಅವಭೃತೋತ್ಸವ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಿಗ್ಗೆ ಎಂಟೂವರೆ ಗಂಟೆಯಿಂದ ಹತ್ತೂವರೆ ಗಂಟೆತನಕ ಸ್ವಾಮೀಜಿದ್ವಯರ ಪಂಚಲೋಹ ವಿಗ್ರಹಕ್ಕೆ ಭಕ್ತರಿಂದ ಸ್ವತಃ ಸೀಯಾಳಾಭಿಷೇಕ ನಡೆಯಲಿದ್ದು, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಟ್ರಸ್ಟಿನ ಅಧ್ಯಕ್ಷ ಬಿ.ಯೋಗೀಶ ಸಪಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *