ರಾಂಚಿ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ರಘುಬರ್ ದಾಸ್ ಜಾರ್ಖಂಡ್‌ನ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ.

Raghubar-Das.

ಇಂದು ರಾಂಚಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರಘುಬರ್ ದಾಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. 2009-10ರಲ್ಲಿ ರಘುಬರ್ ದಾಸ್ ಅವರು ಜಾರ್ಖಂಡ್‌ನ ಉಪಮುಖ್ಯಮಂತ್ರಿ ಕಾರ್ಯನಿರ್ವಹಿಸಿದ್ದರು.

ಕಳೆದ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದ್ದು, ಮೊದಲ ಬಾರಿಗೆ ಬಹುಮತದ ಸರ್ಕಾರವನ್ನು ಬಿಜೆಪಿ ರಚಿಸಲಿದೆ. ಜತೆಗೆ ಇದೇ ಮೊದಲ ಬಾರಿಗೆ ಬುಡಕಟ್ಟು ಜನಾಂಗೇತರರು ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಸರ್ಕಾರ ನಡೆಸಲಿದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಬುಡಕಟ್ಟು ಜನಾಂಗದವರು ಮಾತ್ರ ಸಿಎಂಗಳಾಗಿದ್ದರು. ಈ ಸಂಪ್ರದಾಯವನ್ನು ಬಿಜೆಪಿ ಮುರಿದಿದೆ.

By suddi9

Leave a Reply

Your email address will not be published. Required fields are marked *