ಬೆಂಗಳೂರು:  ಬಸ್ ದರ ಏರಿಕೆ ಬೆನ್ನಲ್ಲೇ ನಂದಿನಿ ಹಾಲಿನ ದರಗಳೂ ಏರಿಕೆಯಾಗುವ ಸಾಧ್ಯತೆವಿದೆ. ಪ್ರತಿ ಲೀಟರ್’​ಗೆ 2ರಿಂದ 3 ರೂಪಾಯಿಯಷ್ಟು ಏರಿಕೆ ಮಾಡುವ ಪ್ರಸ್ತಾಪವನ್ನು ಸರ್ಕಾರದ ಮುಂದಿಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್​ ನಿರ್ಧಾರ ಮಾಡಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿರುವ ಕೆಎಂಎಫ್, ಸಾಗಣಿಕೆ ವೆಚ್ಚ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಪ್ರಸ್ತಾವನೆ ಇಡಲಾಗಿದೆ ಎಂದು  ಕೆಎಂಎಫ್​ ಮೂಲಗಳು ತಿಳಿಸಿವೆ. ದರ ಏರಿಕೆಗೆ ರಾಜ್ಯದ ಹಾಲು ಒಕ್ಕೂಟಗಳು ಒತ್ತಡ ಹಾಕಿದ ಹಿನ್ನಲೆಯಲ್ಲಿ ಕೆಎಂಎಫ್​ ಈ ನಿರ್ಧಾರಕ್ಕೆ ಬಂದಿದೆ ಎಂದೂ ಹೇಳಲಾಗುತ್ತಿದೆ. 

milk

By suddi9

Leave a Reply

Your email address will not be published. Required fields are marked *