ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕ ವತಿಯಿಂದ ಶಂಭೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಕೈಗೊಮಡ ‘ಸ್ವಚ್ಚತಾ ಅಭಿಯಾನ’ ಮತ್ತು ಬೀದಿ ನಾಟಕ ಕಾರ್ಯಕ್ರಮಕ್ಕೆ ಸ್ಥಳೀಯ ನರಿಕೊಂಬು ಗ್ರಾಮ ಪಂಚಾಯಿತಿ ಸದಸ್ಯ ರವೀಂದ್ರ ಸಪಲ್ಯ ಚಾಲನೆ ನೀಡಿದರು.

ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಆನಂದ ಸಾಲ್ಯಾನ್, ಶಿಬಿರಾಧಿಕಾರಿ ಕರುಣಾಕರ, ಮುಖ್ಯಶಿಕ್ಷಕಿ ಲೀಲಾವತಿ, ಪ್ರಮುಖರಾದ ಪುರುಷೋತ್ತಮ, ಹೆನ್ರಿ ಬುಕೆಲೋ, ಸವಿತಾ ವಾಸುದೇವ, ಮೀನಾಕ್ಷಿ, ಲೂಯಿಸ್ ಬುಕೆಲೊ ಮತ್ತಿತರರು ಇದ್ದರು.
