ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ನಿರ್ಮಿಸಲಾದ ರಾಜೀವ ಗಾಂಧಿ ಸೇವಾ ಕೇಂದ್ರ ಮತ್ತು ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೋಮವಾರ ಉದ್ಘಾಟಿಸಿದರು. ಜಿ.ಪಂ.ಸದಸ್ಯೆ ನಳಿನಿ ಬಿ. ಶೆಟ್ಟಿ, ತಾ.ಪಂ.ಅಧ್ಯಕ್ಷ ಯಶವಂತ ಡಿ., ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಗ್ರಾ.ಪಂ. ಅಧ್ಯಕ್ಷ ಸಂಜೀವ ಪೂಜಾರಿ, ಉಪಾಧ್ಯಕ್ಷೆ ರೇವತಿ ಸಪಲ್ಯ ಮತ್ತಿತರರು ಇದ್ದರು.

