ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ ನಂತರ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾ ವಣೆಗೆ ರಾಷ್ಟ್ರೀಯ ಕಾಂಗ್ರೆಸ್ ಚಾಲನೆ ನೀಡಲಿದೆ. 

siddu
ಸಿದ್ದರಾಮಯ್ಯ ಚುನಾವಣೆಗೆ ನಿಲ್ಲುವುದಿಲ್ಲ ಎಂಬ ನಿರ್ಧಾರ ಕೈಗೊಂ ಡಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ಕೊಡುತ್ತಿಲ್ಲ. ಆಡಳಿತದಲ್ಲೂ ಅವರ ಬೆಂಬಲಿಗರಿಗೆ ಅಧಿಕಾರ ದೊರೆ ಯುತ್ತಿದೆ. ಅಧಿಕಾರ ಉಳಿಸಿಕೊಳ್ಳಲಷ್ಟೇ ಸಿದ್ದರಾಮಯ್ಯ ತೊಡಗಿಸಿಕೊಂಡಿದ್ದಾರೆ. ಇದೇ ರೀತಿ ಮುಂದುವರೆದರೆ ಮುಂದಿನ ಮೂರು ವರ್ಷಗಳಲ್ಲಿ ಪಕ್ಷ ಸಂಘಟನೆ ಕೆಳ ಹಂತಕ್ಕೆ ತಲುಪಲಿದೆ. 
ಚುನಾವಣೆಗೆ ನಿಲ್ಲುವುದಿಲ್ಲ ಎಂದವರು ಸಂಘಟನೆ ಒತ್ತು ಕೊಡುವುದಿಲ್ಲ. ನಮಗೆ ಅಧಿಕಾರಕ್ಕಿಂತ ಪಕ್ಷ ಮುಖ್ಯ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರು ಬಂದಿದ್ದಾರೆ. ಇದರ ಸುಳಿವು ಅರಿತ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ನಿನ್ನೆ ಲೋಕಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದರು. ದೆಹಲಿ ಚುನಾವಣೆ ಮುಗಿದ ನಂತರ ರಾಷ್ಟ್ರದಲ್ಲಿ ಸದ್ಯಕ್ಕೆ ಯಾವುದೇ ಸಾರ್ವತ್ರಿಕ ಚುನಾವಣೆಗಳು ಇರುವುದಿಲ್ಲ. ಅಂತಹ ಸನ್ನಿವೇಶದಲ್ಲಿ ಸಿದ್ದರಾಮಯ್ಯ ಬದಲಾವಣೆಗೆ ಚಾಲನೆ ನೀಡೋಣ ಎಂಬ ಸಂದೇಶ ರಾಜ್ಯ ನಾಯಕರಿಗೆ ಬಂದಿದೆ. 

By suddi9

Leave a Reply

Your email address will not be published. Required fields are marked *