ಬಂಟ್ವಾಳ ತಾಲ್ಲೂಕಿನ ತುಂಬೆ ಅಣೆಕಟ್ಟೆಯಿಂದ ಸುರತ್ಕಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಳಾಯಿಬೆಟ್ಟು ಪ್ರದೇಶದ ಒಟ್ಟು 14 ಹಳ್ಳಿ ಸಹಿತ ರೂ 215ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಸ್ಥಾವರ ಸ್ಥಾಪಿಸಿ ಕುಡಿಯುವ ನೀರು ಪೂರೈಕೆಗೆ ಅವಕಾಶ ಒದಗಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತು ಶಾಸಕ ಮೊಯಿದಿನ್ ಬಾವಾ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಎಚ್ಕೆ ಪಾಟೀಲರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

