Dr-sharanappa5mar14-4

ಸುದ್ದಿ 9ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ಡಾ. ಶರಣಪ್ಪ ಅಧಿಕಾರ ಸ್ವೀಕರಿಸಿದರು. ಬುಧವಾರ ಈಗಿನ ಎಸ್ಪಿ ಶಾಂತನೂ ಸಿನ್ಹಾ ಅಧಿಕಾರ ಹಸ್ತಾಂತರಿಸುವ ಮೂಲಕ ಶರಣಪ್ಪ ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶರಣಪ್ಪ, ದ.ಕ ಜಿಲ್ಲೆ ಕೋಮುಸೂಕ್ಷ್ಮ ಪ್ರದೇಶವಾಗಿದೆ ಮತ್ತು ನಕ್ಸಲ್ ಹಾವಳಿ ಕೂಡಾ ಹೆಚ್ಚಾಗಿದೆ. ಈ ಬಗ್ಗೆ ಸರಿಯಾದ ಅಧ್ಯಯನ ನಡೆಸಿದ್ದೇನೆ. ಇವುಗಳ ನಿಗ್ರಹಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಲೋಕಸಭಾ ಚುನಾವಣೆಗೆ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದ್ದು ಅದಕ್ಕೆ ಅಗತ್ಯವಿರುವ ಎಲ್ಲಾ ಭದ್ರತೆಗಳನ್ನು ಮಾಡಿ ಚುನಾವಣೆ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳುವ ಭರವಸೆ ವ್ಯಕ್ತಪಡಿಸಿದರು. ಯಾವುದೇ ರೀತಿಯ ರಾಜಕೀಯ ಒತ್ತಡಕ್ಕೆ ಮಣಿಯದೆ ತನ್ನ ಕರ್ತವ್ಯವನ್ನು ನಿಭಾಯಿಸುವುದಾಗಿ ಅವರು ತಿಳಿಸಿದರು. ಮೂಲತಃ ಗುಲ್ಬಗರ್ಾದವರಾಗಿರುವ ಶರಣಪ್ಪ ಜಿಲ್ಲೆಯಲ್ಲಿ ಕಾನೂನು ಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

By suddi9

Leave a Reply

Your email address will not be published. Required fields are marked *