ಮಕರ ಸಂಕ್ರಾಂತಿಯ ವಿಶೇಷತೆ ತಿಳಿದಿದೆಯೇ?
ಅ. ತಿಥಿ : ಈ ಹಬ್ಬವು ತಿಥಿವಾಚಕ ಆಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಸೂರ್ಯನ ಕಾಲ ವ್ಯತ್ಯಾಸವನ್ನು ಸರಿಪಡಿಸಲು ಪ್ರತಿ 80 ವರ್ಷಕ್ಕೊಮ್ಮೆ ಸಂಕ್ರಾಂತಿಯನ್ನು ಒಂದು ದಿನ ಮುಂದೂಡಲಾಗುತ್ತದೆ.
ಆ. ಇತಿಹಾಸ : ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. ಸಂಕ್ರಾಂತಿಯು ಸಂಕರಾಸುರನೆಂಬ ದೈತ್ಯನ ವಧೆ ಮಾಡಿದ್ದಾಳೆ ಎಂಬ ಕಥೆಯಿದೆ.
ಇ. ಸಂಕ್ರಾಂತಿಯ ಬಗ್ಗೆ ಪಂಚಾಂಗದಲ್ಲಿ ಇರುವ ಮಾಹಿತಿ : ಪಂಚಾಂಗದಲ್ಲಿ ಸಂಕ್ರಾಂತಿಯ ರೂಪ, ವಯಸ್ಸು, ವಸ್ತ್ರ, ಹೋಗುವ ದಿಕ್ಕು ಮುಂತಾದವುಗಳ ಮಾಹಿತಿಯಿರುತ್ತದೆ. ಅದು ಕಾಲಮಹಿಮೆಗನುಸಾರ ಅವಳಲ್ಲಾಗುವ ಬದಲಾವಣೆಯನ್ನು ಅನುಸರಿಸಿರುತ್ತದೆ.
Makara-Jyoti-300x254

images
ಈ. ಸಾಧನೆಯ ದೃಷ್ಟಿಯಿಂದ ಮಹತ್ವ : ಈ ದಿನ ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗಿನ ವಾತಾವರಣವು ಅಧಿಕ ಚೈತನ್ಯಮಯವಾಗಿರುವುದರಿಂದ ಸಾಧನೆಯನ್ನು ಮಾಡುವವರಿಗೆ ಈ ಸಮಯದಲ್ಲಿ ಚೈತನ್ಯದ ಲಾಭವಾಗುತ್ತದೆ.
ಉ. ಹಬ್ಬವನ್ನು ಆಚರಿಸುವ ಪದ್ಧತಿ
ಉ 1. ಮಕರಸಂಕ್ರಾಂತಿಯ ಕಾಲದಲ್ಲಿ ತೀರ್ಥಸ್ನಾನವನ್ನು ಮಾಡುವುದರಿಂದ ಮಹಾಪುಣ್ಯವು ದೊರೆಯುವುದು : ಮಕರಸಂಕ್ರಾಂತಿಯ ದಿನ ಸೂರ್ಯೋಯದಿಂದ ಸೂರ್ಯಾ ಯಸ್ತದ ವರೆಗಿನ ಕಾಲವು ಪುಣ್ಯಕಾಲವಾಗಿರುತ್ತದೆ.  ಈ ಕಾಲದಲ್ಲಿ ತೀರ್ಥಸ್ನಾನಕ್ಕೆ ವಿಶೇಷ ಮಹತ್ವವಿದೆ. ಗಂಗಾ, ಯಮುನಾ, ಗೋದಾವರಿ, ಕೃಷ್ಣಾ ಮತ್ತು ಕಾವೇರಿ ನದಿಗಳ ದಡದಲ್ಲಿರುವ ಕ್ಷೇತ್ರದಲ್ಲಿ ಸ್ನಾನ ಮಾಡಿದರೆ ಮಹಾಪುಣ್ಯವು ಲಭಿಸುತ್ತದೆ.
ಉ 2. ದಾನ
ಉ 2 ಅ. ಪರ್ವಕಾಲದಲ್ಲಿ ದಾನದ ಮಹತ್ವ : ಮಕರಸಂಕ್ರಾಂತಿಯಿಂದ ರಥ ಸಪ್ತಮಿಯವರೆಗಿನ ಕಾಲವು ಪರ್ವಕಾಲವಾಗಿರುತ್ತದೆ. ಈ ಪರ್ವಕಾಲದಲ್ಲಿ ಮಾಡಿದ ದಾನ ಮತ್ತು ಪುಣ್ಯಕರ್ಮಗಳು ವಿಶೇಷ ಫಲವನ್ನು ಕೊಡುತ್ತವೆ.
ಉ 2 ಆ. ದಾನ ಕೊಡುವ ವಸ್ತುಗಳು : ಹೊಸಪಾತ್ರೆ, ವಸ್ತ್ರ, ಅನ್ನ, ಎಳ್ಳು, ಎಳ್ಳುಪಾತ್ರೆ, ಬೆಲ್ಲ, ಆಕಳು, ಕುದುರೆ, ಚಿನ್ನ ಅಥವಾ ಭೂಮಿಯನ್ನು ಯಥಾಶಕ್ತಿ ದಾನ ಮಾಡಬೇಕು. ಈ ದಿನ ಮುತ್ತೈದೆಯರು ದಾನ ಮಾಡುತ್ತಾರೆ. ಮುತ್ತೈದೆಯರು ಕೆಲವು ಪದಾರ್ಥಗಳನ್ನು ಕುಮಾರಿಯರಿಂದ ದೋಚುತ್ತಾರೆ (ಅಪಹರಿಸುತ್ತಾರೆ) ಮತ್ತು ಅವರಿಗೆ ಎಳ್ಳುಬೆಲ್ಲ ಕೊಡುತ್ತಾರೆ.
ಉ 2 ಆ 1. ಬಾಗಿನ ನೀಡುವುದರ ಮಹತ್ವ : ಬಾಗಿನ ನೀಡುವುದೆಂದರೆ ಇನ್ನೊಂದು ಜೀವದಲ್ಲಿನ ದೇವತ್ವಕ್ಕೆ ತನು, ಮನ ಮತ್ತು ಧನದಿಂದ ಶರಣಾಗುವುದು. ಸಂಕ್ರಾಂತಿಯ ಕಾಲವು ಸಾಧನೆಗೆ ಪೂರಕವಾಗಿರುವುದರಿಂದ ಈ ಕಾಲದಲ್ಲಿ ನೀಡಿದ ಬಾಗಿನದಿಂದ ದೇವತೆಯ ಕೃಪೆಯಾಗಿ ಜೀವಕ್ಕೆ ಇಚ್ಛಿತ ಫಲಪ್ರಾಪ್ತಿಯಾಗುತ್ತದೆ.
ಉ 2 ಆ 2. ಬಾಗಿನವೆಂದು ಯಾವ ವಸ್ತುಗಳನ್ನು ಕೊಡಬೇಕು ? : ಇತ್ತೀಚೆಗೆ ಸಾಬೂನು, ಪ್ಲಾಸ್ಟಿಕ್ನ ವಸ್ತುಗಳಂತಹ ನಿರುಪಯುಕ್ತ ವಸ್ತುಗಳನ್ನು ಬಾಗಿನವೆಂದು ಕೊಡುವ ಅಯೋಗ್ಯ ಪದ್ಧತಿಯು ರೂಢಿಯಲ್ಲಿದೆ. ಈ ವಸ್ತುಗಳ ಬದಲಿಗೆ ಸೌಭಾಗ್ಯದ ವಸ್ತುಗಳು, ಊದುಬತ್ತಿ, ಉಟಣೆ, ಧಾಮರ್ಿಕಗ್ರಂಥ, ಪುರಾಣಗ್ರಂಥ, ದೇವತೆಗಳ ಚಿತ್ರ, ಅಧ್ಯಾತ್ಮದ ಬಗೆಗಿನ ಧ್ವನಿಚಿತ್ರಮುದ್ರಿಕೆ ಮುಂತಾದ ಅಧ್ಯಾತ್ಮಕ್ಕೆ ಪೂರಕವಾಗಿರುವ ವಸ್ತುಗಳನ್ನು ಕೊಡಬೇಕು.
ಎಳ್ಳಿನ ಉಪಯೋಗ
ಸಂಕ್ರಾಂತಿಯಲ್ಲಿ ಎಳ್ಳನ್ನು ಆದಷ್ಟು ಹೆಚ್ಚು ಪ್ರಮಾಣದಲ್ಲಿ ಉಪಯೋಗಿಸುತ್ತಾರೆ, ಉದಾ.ಎಳ್ಳುನೀರಿನಿಂದ ಸ್ನಾನ ಮಾಡಿ ಎಳ್ಳು ಬೆಲ್ಲವನ್ನು ಸೇವಿಸುವುದು ಹಾಗೂ ಇತರರಿಗೂ ಕೊಡುವುದು, ಬ್ರಾಹ್ಮಣರಿಗೆ ಎಳ್ಳು ದಾನ ಮಾಡುವುದು, ಶಿವಮಂದಿರದಲ್ಲಿ ಎಳ್ಳೆಣ್ಣೆಯ ದೀಪಗಳನ್ನು ಹಚ್ಚುವುದು, ಪಿತೃಶ್ರಾದ್ಧ ಮಾಡುವುದು (ಇದರಲ್ಲಿ ತಿಲಾಂಜಲಿ ನೀಡುತ್ತಾರೆ).

(ಕೃಪೆ: ಸನಾತನ ನಿರ್ಮಿತ ಗ್ರಂಥ ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು)

By suddi9

Leave a Reply

Your email address will not be published. Required fields are marked *