ಮಂಗಳೂರು: ರಸ್ತೆ ದಾಟುತ್ತಿದ್ದ ತಾಯಿ-ಮಗು ಮೇಲೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರೂ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಪಾಲಾದ ಘಟನೆ ಮಂಗಳೂರಿನ ನಂತೂರು ಪವು ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಅಪಘಾತಕ್ಕೆ ಬೈಕ್ ಸವಾರನ ನಿರ್ಲಕ್ಷ್ಯವೇ ಕಾರಣ ಎಂದು ಆಪಾದಿಸಲಾಗಿದೆ. ತಾಯಿ ಮಗು ಇಬ್ಬರೂ ರಸ್ತೆ ದಾಟುತ್ತಿದ್ದ ವೇಳೆ ನಂತೂರಿನಿಂದ ಕದ್ರಿ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
