ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೂತನ ಶ್ರೀ ಮಹಾಗಣಪತಿ ದೇವರ ಹಾಗೂ ಶ್ರೀ ಮೂಲದುರ್ಗಾ ದೇವಿಯ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಜ.21 ರಿಂದ ಜ. 25ರವರಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ. ದಾಳಿಂಬ ಶ್ರೀಪತಿ ರಾವ್ ತಿಳಿಸಿದರು.
ಗುರುವಾರ ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಕರೆದ ಸುದ್ದಿ ಗೋಷ್ಟಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದರು. ಬ್ರಹ್ಮಕಲಶೋತ್ಸವದ ಅಂಗವಾಗಿ ಐದು ದಿನಗಳ ಕಾಲ ಹೋಮ ಸಹಿತ ವಿವಿಧ ಧಾರ್ಮಿಕ ಕಾರ್ಯಗಳು, ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಬಾಗವಹಿಸಲಿದ್ದಾರೆ. ಜ.25 ರಂದು ಬೆಳಗ್ಗಿನ 8.12ರ ಕುಂಭ ಲಗ್ನ ಸುಮುಹೂರ್ತದಲ್ಲಿ ಗಣಪತಿ ಹಾಗೂ ಶ್ರೀ ದುರ್ಗಾ ದೇವಿಯ ಪ್ರತಿಷ್ಠೆ, ನ್ಯಾಸದಿ ಕಾರ್ಯಗಳು ಹಾಗೂ ಬ್ರಹ್ಮ ಕಲಶಾಭಿಷೇಕ ನಡೆಯಲಿದೆ ಎಂದರು. ರಾತ್ರಿ 8 ಗಂಟೆಗೆ ಬ್ರಹ್ಮ ಕಲಶೋತ್ಸವದ ಸಮಾರೋಪ ಸಮಾರಂಭ, ರಾತ್ರಿ 10ಕ್ಕೆ ರಕ್ತೇಶ್ವರೀ ಪಿಲಿಚಾಮುಂಡಿ, ಕಲ್ಲುರ್ಟಿ, ಪಂಜುರ್ಲಿ , ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ಬ್ರಹ್ಮಕಲಶೋತ್ಸವದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಕಾಯೋನ್ಮುಖವಾಗಿದೆ ಎಂದು ಅವರು ತಿಳಿಸಿದರು
ಸುದ್ದಿ ಗೋಷ್ಟಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಅಮರನಾಥ ಅಜಿಲ, ಜಿಈರ್ಣೋದ್ದಾರ ಸಮಿತಿ ಅದ್ಯಕ್ಷ ಬಾಲಕೃಷ್ಣ ಶೆಟ್ಟಿ, ಆಡಳಿತ ಮಂಡಳಿ ಅಧ್ಯಕ್ಷ ಪಿ.ಸುಬ್ರಹ್ಮಣ್ಯ ಭಟ್, ಶಂಕರ್ ಭಟ್ ಕಂಪದ ಕೋಡಿ ಹಾಜರಿದ್ದರು.
