ಬಂಟ್ವಾಳ:ದೇಶದಲ್ಲಿ ಸುಸಂಸ್ಕೃತ ಪ್ರಜೆಗಳನ್ನು ರೂಪಿಸುತ್ತಿರುವ ಗ್ರಾಮೀಣ ಸರ್ಕರಿ ಶಾಲೆಗಳ ಅಭಿವೃದ್ಧಿಗೆ ಸರ್ವಶಿಕ್ಷಾ ಅಭಿಯಾನ ಮೂಲಕ ಸಾಕಷ್ಟು ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸರ್ಕಾರ ಶ್ರಮಿಸುತ್ತಿದ್ದು, ಪ್ರತಿಯೊಬ್ಬರೂ ಸುಶಿಕ್ಷಕಿತರಾಗಿ ಸ್ವಾವಲಂಬಿ ಬದುಕು ನಡೆಸಿದಾಗ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾ ಣವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.


ಕೊಯಿಲ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ರಾತ್ರಿ ನಡೆದ ಶಾಲಾ ಶತಮಾನೋತ್ಸವ ಸಮಾರಂಭದಲ್ಲಿ ಅವರು ರೂ 30ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ‘ಶತಾಬ್ದಿ’ ನೂತನ ರಂಗಮಂದಿರ ಉದ್ಘಾಟಿಸಿ ಸಮಾರೋಪ ಭಾಷಣ ಮಾಡಿದರು.
ಪ್ರತಿಯೊಂದು ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಅಲ್ಲಿನ ಶಿಕ್ಷಕರ ಜೊತೆಗೆ ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆ ವಿದ್ಯಾರ್ಥಿಗಳ ಜವಾಬ್ದಾರಿಯೂ ಇದೆ ಎಂದು ಅವರು ಹೇಳಿದರು.
ದ.ಕ.ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರು ‘ಶತಾಬ್ದಿ’ ರಂಗಮಂದಿರ ನಾಮಫಲಕ ಅನಾವರಣಗೊಳಿಸಿ ಮಾತನಾಡಿ, ಮಕ್ಕಳಿಗೆ ಬಾಲ್ಯದಲ್ಲಿ ಸುಸಂಸ್ಕೃತ ಶಿಕ್ಷಣದೊಂದಿಗೆ ಗುರು ಹಿರಿಯರನ್ನು ಭಕ್ತಿಯಿಂದ ಗೌರವಿಸುವ ದೇಶೀಯ ಸಂಸ್ಕಾರ ನೀಡುವ ಮಹತ್ತರ ಜವಾಬ್ದಾರಿ ಶಿಕ್ಷಕರ ಜೊತೆಗೆ ಮಕ್ಕಳ ಪೋಷಕರಿಗೂ ಇದೆ ಎಂದರು.
ಸ್ಥಳೀಯ ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ಮಧುಕರ ಬಂಗೇರ ಕಾರ್ಯಕ್ರಮದ ಅಧ್ಯಕ್ಷೆ ವಹಿಸಿ ಮಾತನಾಡಿದರು.
ಇಲ್ಲಿನ ಹಳೆ ವಿದ್ಯಾಥರ್ಿ ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಸನ್ಮಾನ ಸ್ವೀಕರಿಸಿ, ಹಳೆ ವಿದ್ಯಾರ್ಥಿ ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಸಂಪಾದಕತ್ವದಲ್ಲಿ ಪ್ರಕಟಿಸಲಾದ ‘ಶತನಮನ’ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ ನಾಯಕ್ ರಾಯಿ, ಕ್ರೀಡಾಪಟು ಪದ್ಮನಾಭ ಆಚಾರ್ಯ, ನಿವೃತ್ತ ಶಿಕ್ಷಕಿ ಜೆ.ಕೆ.ಪಾವನಾದೇವಿ, ಶಾಲಾಭಿವೃದ್ಧಿ ಸಮಿತಿ ನಿಕಟಪೂರ್ವ ಉಪಾಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ ಇವರನ್ನು ಸಚಿವರು ಸನ್ಮಾನಿಸಿದರು.
ಸ್ಥಳೀಯ ತಾ.ಪಂ.ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಶಿಕ್ಷಣ ಸಂಯೋಜಕಿ ಸುಜಾತ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಕುಮಾರ್ ಡಿ., ಪ್ರಭಾರ ಮುಖ್ಯಶಿಕ್ಷಕ ಸುಧೀರ್ ಜಿ. ಮತ್ತಿತರರು ಶುಭ ಹಾರೈಸಿದರು.
ನಿವೃತ್ತ ಮುಖ್ಯಶಿಕ್ಷಕಿ ಶಶಿಕಲಾ, ಗ್ರಾ.ಪಂ. ಸದಸ್ಯರಾದ ಪ್ರಶಾಂತ ಶೆಟ್ಟಿ, ವನಜ ಗಂಗಾಧರ, ರೂಪ ಜಗದೀಶ, ಕಿನ್ನಿಬೆಟ್ಟು ಶಾಲೆ ಮುಖ್ಯಶಿಕ್ಷಕ ವೇದಾನಂದ ಕಾರಂತ, ಕರ್ಣಾಟಕ ಬ್ಯಾಂಕಿನ ನಿವೃತ್ತ ಶಾಖಾಧಿಕಾರಿ ಶ್ರೀಧರ ಭಟ್ ಮತ್ತಿತರರು ಇದ್ದರು. ದೈಹಿಕ ಶಿಕ್ಷಕಿ ಪಾಸ್ಕಲ್ಯ ಕ್ರೀಡಾ ಸಾಧಕರನ್ನು ಗುರುತಿಸಿ ಗೌರವಿಸಿದರು. ಶಿಕ್ಷಕರಾದ ಸಂತೋಷ್, ವಿಜಯಾನಂದ ಡಿಸೋಜ, ಮೇಬಲ್ ಫೆನರ್ಾಂಡಿಸ್, ಮಂಜುಳಾ, ಲವಿನಾ ಮೇಬಲ್ ಸನ್ಮಾನಿತರನ್ನು ಪರಿಚಯಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಚಾರ್ಯ ಸ್ವಾಗತಿಸಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಮಾವಂತೂರು ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಶಿಕ್ಷಕಿ ಮಸ್ಕರೆನ್ ಪಾಯಸ್ ವಾರ್ಷಿಕ ವರದಿ ವಾಚಿಸಿದರು. ಸಮಿತಿ ಜೊತೆ ಕಾರ್ಯದರ್ಶಿ ಸುಮಾ ನಾಗರಾಜ್ ವಂದಿಸಿ, ಶಿಕ್ಷಕ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ‘ಅರೆನ್ ಮುಟ್ಟರೆ ಆವಾ’ ತುಳು ನಾಟಕ ಪ್ರದರ್ಶನಗೊಂಡಿತು
