ಮಂಗಳೂರು: ಬಿಎಚ್‍ಪಿ ಕಾಂಗ್ರೆಸ್ ತತ್ವಕ್ಕೆ ವಿರುದ್ಧವಾಗಿದ್ದು, ಅದರ ವಿರುದ್ಧ ಕ್ರಮ ಕೈಗೊಳ್ಳಲು ಯಾವ ಕಾಂಗ್ರೆಸ್ ಮುಖಂಡನಿಗೂ ಧೈರ್ಯವಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‍ನ ಮಾಜಿ ಸಚಿವ ಜನಾರ್ದನ ಪೂಜಾರಿಯವರು ತನ್ನ ಪಕ್ಷದ ಮುಖಂಡರ ವಿರುದ್ಧವೇ ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಪತ್ರಕರ್ತರ ಮುಂದೆ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಪೂಜಾರಿ ಪುತ್ತೂರಿನಲ್ಲಿ ಸ್ಥಾಪನೆಯಾದ ಭಾರತೀಯ ಹಿಂದೂ ಪರಿಷತ್ ಕಾಂಗ್ರೆಸ್ ತತ್ವ ಸಿದ್ಧಾಂತಗಳಿಗೆ ವಿರುದ್ಧವಾಗಿದ್ದು, ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ. ಕಾಂಗ್ರೆಸ್ ಮುಖಂಡ ಯಾವುದೇ ಮತೀಯ ಸಂಘಟನೆಯನ್ನು ಸ್ಥಾಪಿಸುವಂತೆ ಹೇಳಿಲ್ಲ. ಅವರ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂಬವುದನ್ನು ಒತ್ತಿ ಹೇಳಿದ್ದಾರೆ.
