ಬಂಟ್ವಾಳ:ತಾಲ್ಲೂಕಿನ ವಾಮದಪದವು ಸಮೀಪದ ಪಿಲಿಮೊಗರು ಗ್ರಾಮದ ದಪ್ಪರಬೈಲು ಎಂಬಲ್ಲಿ ವ್ಯಕ್ತಿಯೊಬ್ಬರು ಪರವಾನಿಗೆ ರಹಿತವಾಗಿ ಗೋಡಾನ್ ನಿಮರ್ಿಸುತ್ತಿದ್ದಾರೆ ಎಂದು ಆರೋಪಿಸಿ ಎರಡು ತಂಡಗಳ ನಡುವೆ ಉಂಟಾದ ಪರಸ್ಪರ ಮಾತಿನ ಚಕಮಕಿ ಮತ್ತು ಕೊಲೆಯತ್ನ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ.
ಸ್ಥಳೀಯ ದಪ್ಪರಬೈಲು ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ ಶೆಟ್ಟಿ ತನ್ನ ಮನೆ ಸಮೀಪದಲ್ಲಿ ನಿಮರ್ಿಸುತ್ತಿರುವ ಗೋಡಾನ್ಗೆ ಪಂಚಾಯಿತಿನಿಂದ ಯಾವುದೇ ಪರವಾನಿಗೆ ಪಡೆದುಕೊಂಡಿಲ್ಲ ಎಂದು ಇಲ್ಲಿನ ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿನಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯಸಭೆಯಲ್ಲಿ ಸ್ಥಳೀಯ ಗ್ರಾ.ಪಂ.ಸದಸ್ಯ ರಮಾನಂದ ಸಪಲ್ಯ ಆರೋಪಿಸಿದ್ದರು ಎನ್ನಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಜಗದೀಶ ಶೆಟ್ಟಿ ಮತ್ತು ರಮಾನಂದ ಸಪಲ್ಯ ಎಂಬವರ ನಡುವೆ ಶನಿವಾರ ಪರಸ್ಪರ ಮಾತಿನ ಚಕಮಕಿ ನಡೆದಿದ್ದು, ಬಳಿಕ ಇಬ್ಬರೂ ಪ್ರತ್ಯೇಕ ಆಸ್ಪತ್ರೆಯಲ್ಲಿ ದಾಖಲಾಗಿ ಹಲ್ಲೆ, ಜೀವ ಬೆದರಿಕೆ ಮತ್ತು ಕೋವಿ ತೋರಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಪ್ರತ್ಯೇಕ ದೂರು ಸಲ್ಲಿಸಿದ್ದಾರೆ.
ಈ ದೂರಿಗೆ ಸಂಬಂಧಿಸಿದಂತೆ ಗ್ರಾ.ಪಂ.ಸದಸ್ಯ ರಮಾನಂದ ಸಪಲ್ಯ, ಜಗದೀಶ ಶೆಟ್ಟಿ, ವೆಂಕಪ್ಪ ಶೆಟ್ಟಿ, ಜಗನ್ನಾಥ ಶೆಟ್ಟಿ, ರಾಮ ಮಡಿವಾಳ, ಯೋಗೀಶ ಪ್ರಭು ಮತ್ತಿತರ ಐವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

By suddi9

Leave a Reply

Your email address will not be published. Required fields are marked *