ಕುಂದಾಪುರ: ಕಳೆದ ಜ.21ರಂದು ಗಂಗೊಳ್ಳಿಯ ವೆಂಕಟೇಶ ಕಪಾ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಅಣ್ಣಾಮಲೈ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಸ್ಥಳೀಯ ಬಾಬಾಷಾ ಮೊಹಲ್ಲಾ ನಿವಾಸಿ ಜುನೈದ್ (23) ಎಂದು ಗುರುತಿಸಲಾಗಿದೆ.

ತಡರಾತ್ರಿ 2.15ರ ಸುಮಾರಿಗೆ ಮಾರುತಿ ಓಮ್ನಿಯಲ್ಲಿ ಆಗಮಿಸಿ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದ್ದು ತನಿಖೆ ಕೈಗೆತ್ತಿಕೊಂಡ ಕುಂದಾಪುರ ಡಿವೈಎಸ್ಪಿ ಮಂಜುನಾಥ ಶೆಟ್ಟಿ, ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸುದರ್ಶನ್, ಗಂಗೊಳ್ಳಿ ಪಿಎಸ್‌ಐ ಸುಬ್ಬಣ್ಣ ಮತ್ತು ಪೊಲೀಸ್ ತಂಡ ಆರೋಪಿಯನ್ನು ಭಟ್ಕಳದಲ್ಲಿ ಬಂಧಿಸಿದೆ. ಕತ್ಯಕ್ಕೆ ಬಳಸಿದ ಮಾರುತಿ ಓಮ್ನಿ ಕಾರು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಫೆ.13ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

By suddi9

Leave a Reply

Your email address will not be published. Required fields are marked *