ಮಂಗಳೂರು: ವಿಶ್ವಹಿಂದೂ ಪರಿಷತ್‍ನ ರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ಭಾಯ್ ತೊಗಡಿಯಾ ಅವರಿಗೆ ಫೆ.8ರಂದು ಬೆಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ನಡೆಯಲಿರುವ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ತಡೆಯೊಡ್ಡಿರುವುದನ್ನು ವಿರೋಧಿಸಿ ಇಂದು ನಗರದ ಪಿವಿಎಸ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿತು.

vhp1

vhp2

vhp3
ಸರ್ಕಾರ ಕೂಡಲೇ ತೊಗಡಿಯಾ ಬೆಂಗೂರು ಪ್ರವೇಶ ನಿಷೇಧವನ್ನು ವಾಪಾಸ್ ಪಡೆಯಬೇಕು, ಇಲ್ಲವಾದಲ್ಲಿ ಮುಂದೆ ಉಗ್ರ ಪ್ರತಿಭಟನೆ ನಡೆಸುವುದಾಗಿ ವಿಎಚ್‍ಪಿ ಮುಖಂಡ ಜಗದೀಶ್ ಶೇಣವ ಎಚ್ಚರಿಕೆ ನೀಡಿದರು. ಸರ್ಕಾರ ಪ್ರವೀಣ್ ತೊಗಾಡಿಯಾ ಮೇಲೆ ಹಾಕಿರುವ ನಿರ್ಬಂಧವನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ತೆರಳುತ್ತೇವೆ. ಆ ಬಳಿಕ ಏನಾದರೂ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಅವರು ಎಚ್ಚರಿಸಿದರು.
ಈ ಸಂದರ್ಭ ವಿಹಿಂಪ ಮುಖಂಡರುಗಳಾದ ಜಗದೀಶ್ ಶೇಣವ, ಜಿತೇಂದ್ರ ಕೊಟ್ಟಾರಿ, ಭಜರಂಗದಳದ ಪ್ರಮುಖ ಶರಣ್ ಪಂಪ್‍ವೆಲ್, ಪುನೀತ್ ಕೊಟ್ಟಾರಿ ಸೇರಿದಂತೆ ಹಲವಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

By suddi9

Leave a Reply

Your email address will not be published. Required fields are marked *