ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಆಲದಪದವು ಅಕ್ಷರ ಪ್ರತಿಷ್ಠಾನ ವತಿಯಿಂದ ನೀಡಲಾಗುವ ‘ತುಳುನಾಡ ತುಳುಶ್ರೀ’ ಪ್ರಶಸ್ತಿಯನ್ನು ಹಿರಿಯ ಸಾಹಿತಿ, ಜಾನಪದ ಸಂಶೋಧಕ ಮುದ್ದು ಮೂಡುಬೆಳ್ಳೆ ಇವರಿಗೆ ಇಲ್ಲಿನ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಾನುವಾರ ವಿತರಿಸಲಾಯಿತು.
9btl-prashasthi
ದೇವಳ ಧರ್ಮದರ್ಶಿ ಉದಯ ಪಾಂಗಣ್ಣಾಯ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮುದ್ದು ಮೂಡುಬೆಳ್ಳೆ ಅವರು ಮಾತನಾಡಿ, ಕಲೆ ಸಾಹಿತ್ಯ ಕ್ಷೇತ್ರದ ಪ್ರತಿಭಾವಂತರನ್ನು ಗುರುತಿಸಿ ಗೌರವಿಸುವ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಎಂದರು.
ಧರ್ಮದರ್ಶಿ ಕೆ.ಲಕ್ಷ್ಮೀನಾರಾಯಣ ಉಡುಪ ಕಾರ್ಯಕ್ರಮ ಉದ್ಘಾಟಿಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಿ.ಎಂ.ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಸದಸ್ಯ ರಘು ಇಡ್ಕಿದು ಅವರು ಅಭಿನಂದನಾ ಭಾಷಣ ಮಾಡಿದರು.
ಬಂಟ್ವಾಳ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಧರ್ಮದರ್ಶಿ ಸುಂದರ ನಾಯ್ಕ್, ಅಕ್ಷರ ಪ್ರತಿಷ್ಠಾನದ ಅಧ್ಯಕ್ಷ ಡಾ.ರಾಮಕೃಷ್ಣ ಎಸ್., ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್, ಸಂಚಾಲಕ ಗೋಪಾಲ ಅಂಚನ್, ನಿದರ್ೇಶಕರಾದ ದಿನೇಶ್ ಅಮೀನ್, ರತ್ನದೇವ್ ಪುಂಜಾಲಕಟ್ಟೆ, ಎಚ್ಕೆ.ನಯನಾಡು ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *