ಸುದ್ದಿ9 ಮೂಲ್ಕಿ: ವಿಶೇಷ ಕುಸುರಿ ಕೌಶಲ ಹೊಂದಿರುವ ವಿಶ್ವಕರ್ಮ ಸಮುದಾಯವು ವಿಶ್ವ ಮಾನ್ಯತೆ ಪಡೆದಿದೆ. ವಿಶ್ವಕರ್ಮರು ವಿಶ್ವಮಾನ್ಯರು ಎಂಬುದಾಗಿ ಆಧ್ಯಾತ್ಮಿಕ ಗುರು, ಅಂತಾರಾಷ್ಟ್ರೀಯ ವಾಸ್ತು ತಜ್ಞ, ವೈಜ್ಞಾನಿಕ ಜೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.
ಅವರು ಮೂಲ್ಕಿಯ ತಮ್ಮ ಆಶ್ರಮದಲ್ಲಿ ದ.ಕ., ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಉಪಾಧ್ಯಕ್ಷ ಮಧು ಆಚಾರ್ಯರನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌ ಅಭಿನಂದಿಸಿದ ಸಮಾರಂಭದಲ್ಲಿ ಮಾತನಾಡಿದರು.
vishwakarma (1)

 ವಿಶ್ವಕರ್ಮ ಸಮುದಾಯಕ್ಕೆ ಸೂಕ್ತ ರಾಜಕೀಯ ಸ್ಥಾನಮಾನ,ಹಾಗೂ ಸಮಗ್ರ ಅಭಿವೃದ್ಧಿಗೆ ಮಂಡಳಿಯ ರಚನೆ ಸೇರಿದಂತೆ ವಿಶ್ವಕರ್ಮ      ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸ್ವಾಮೀಜಿಯವರು ಪರಮೇಶ್ವರ್‌ರಿಗೆ ಸೂಚಿಸಿದರು. ಇದಕ್ಕೆ ಸ್ಪಂದಿಸಿದ ಕೆಪಿಸಿಸಿ ಅಧ್ಯಕ್ಷ    ಪರಮೇಶ್ವರ್‌, ಶ್ರಮಜೀವಿಗಳಾದ ವಿಶ್ವಕರ್ಮ ಸಮುದಾಯಕ್ಕೆ ಸೂಕ್ತ ಸ್ಥಾನಮಾನವನ್ನು ನೀಡಲು, ಅವರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ   ಸರಕಾರಕ್ಕೆ ಸೂಚಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಆಶ್ರಮದ ನಿರ್ದೇಶಕಿ ರಜನಿ ಸಿ. ಭಟ್‌ ಉಪಸ್ಥಿತರಿದ್ದರು.

 

By Suddi9

Leave a Reply

Your email address will not be published. Required fields are marked *