ಸುದ್ದಿ9 ಬಂಟ್ವಾಳ: ಬಂಟ್ವಾಳ ಕೆಳಗಿನಪೇಟೆ ಖಾಸಗಿ ಶಾಲೆಯೊಂದರಲ್ಲಿ ಹೊಟ್ಟೆ ಹುಳಭಾದೆಗೆ ಮಾತ್ರೆ ಸೇವಿಸಿದ ನಾಲ್ವರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಇಲ್ಲಿನ ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ನಡೆದಿದೆ.
ಬಂಟ್ವಾಳ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ ಮಕ್ಕಳಿಗೆ ಹೊಟ್ಟೆ ಹುಳಭಾದೆ ಮಾತ್ರೆ ನೀಡಲಾಗಿದ್ದು, ಈ ಪೈಕಿ ನಾಲ್ವರು ವಿದ್ಯಾರ್ಥಿನಿಯರು ವಾಂತಿ ಮಾಡಿ ಅಸ್ವಸ್ಥಗೊಂಡ ಪರಿಣಾಮ ತಕ್ಷಣವೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಗೆ ಸೂಕ್ತ ರೀತಿಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮನೆಗೆ ಕಳುಹಿಸಿ ಕೊಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅನುದಾನ ರಹಿತ ಶಾಲೆಗಳಲ್ಲಿ ಇಂತಹ ಮಾತ್ರೆ ನೀಡುವ ಕ್ರಮ ಇಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಸ್ಪಷ್ಟಪಡಿಸಿದ್ದಾರೆ.
