ಕಣ್ಣೂರು: ಬಿಜೆಪಿ ಕಾರ್ಯಕರ್ತನ ಮೇಲೆ ಸಿಪಿಎಂ ಕಾರ್ಯಕರ್ತರು ಕಲ್ಲುತೂರಾಟ ನಡೆಸಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ. ಕಲ್ಲೇಟಿನಿಂದ ಗಾಯಗೊಂಡ ಬಿಜೆಪಿ ಕಾರ್ಯಕರ್ತ ಕೆ.ಕೆ.ರಾಜನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜನ್ ಅವರು ಕಣ್ಣೂರಿನ ಉದಯಗಿರಿ ನಿವಾಸಿಯಾಗಿದದು, ಕೋತಲೂರು ಎಳನಲ್ಲಿನ ಚೀಕ್ಕಾಡ್ ಎಂಬಲ್ಲಿ ಸಿಪಿಎಂ ಕಾರ್ಯಕರ್ತರ ಕಲ್ಲೇಟಿನಿಂದ ಗಾಯಗೊಂಡಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಣ್ಣೂರಿನಲ್ಲಿ ಕೆ.ಟಿ ಜಯಕೃಷ್ಣನ್ ಎಂಬವರ ಬಲಿದಾನ ದಿವಸದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಸಿಪಿಎಂ ಕಾರ್ಯಕರ್ತರು ಕ್ಲಲು ತೂರಾಟ ನಡೆಸಿದ್ದರು ಎಂದು ಆಪಾದಿಸಲಾಗಿದ್ದು ಈ ವೇಳೆ ರಜನ್ ಗಂಭಿರ ಸ್ಥಿತಿಯಲ್ಲಿ ಗಾಯಗೊಂಡಿದ್ದರು ಎನ್ನಲಾಗಿದೆ.
