ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ತಾ. ಪಂ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯಾವಿವಾಹ ನಿಷೇಧ ಮಾಹಿತಿ ಕಾರ್ಯಗಾರ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು. ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಮಂಜು ವಿಟ್ಲ, ಸಿಡಿಪಿಒ ಮಲ್ಲಿಕಾ, ಎಸಿಡಿಪಿಒ ಅನ್ನಪೂರ್ಣ, ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಸರೋಜಾ ಭಟ್, ಭಾರತಿ ಉಪಸ್ಥಿತರಿದ್ದರು.
