ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಜನರನ್ನು ವಂಚಿಸುತ್ತಿದೆ. ಸರಕಾರದ ಧೋರಣೆಯಿಂದ ಬೇಸತ್ತಿರುವ ಮತದಾರ ಏಪ್ರಿಲ್ 17ರಂದು ನಡೆಯಲಿರುವ ಮಹಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಗಳಿಸುವುದು ಖಚಿತ ಎಂದು ಬಿಜೆಪಿ ನಾಯಕ ಕ.ಎಸ್ ಈಶ್ವರಪ್ಪ ತಿಳಿಸಿದರು. ಭಾನುವಾರ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೆಶದಲ್ಲಿ ಮಾತನಾಡಿದ ಅವರು ದೇಶದೆಲ್ಲೆಡೆ ಮೋದಿ ಅಲೆಯಿದ್ದು ಈ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಲಿದೆ ಎಂದು ಹೇಳಿದರು.

K-S-Eshwarappa

ಮಂಗಳೂರು ದಕ್ಷಿಣದಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ವಿರುದ್ಧವಾಗಿ ಕಾಂಗ್ರೆಸ್ ನಿಂದ ಜನಾರ್ದನ ಪೂಜಾರಿ ಸ್ಪರ್ಧಿಸುತ್ತಿದ್ದಾರೆ. ಆದರೆ ಸ್ವಪಕ್ಷದಲ್ಲೇ ಅವರಿಗೆ ತೀವ್ರ ವಿರೋಧವಿದ್ದು ಆಂತರಿಕ ಕಚ್ಚಾಟದಿಂದಲೇ ಅವರು ಸೋಲಲಿದ್ದಾರೆ ಎಂದು ಈಶ್ವರಪ್ಪ ತಿಳಿಸಿದರು.

By Suddi9

Leave a Reply

Your email address will not be published. Required fields are marked *