ಬಂಟ್ವಾಳ : ಪುರಸಭಾ ವ್ಯಾಪ್ತಿಯ 2013-14 ನೇ ಸಾಲಿನ ಎಸ್.ಎಫ್.ಸಿ ಅನುದಾನ 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪೊಕ್ಕಿಗುಡ್ಡೆಯಿಂದ ಕುದನೆಗುಡ್ಡೆವರೆಗೆ ಮರುಡಾಮರೀಕರಣದ ವನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು . ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ , ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ಗೌಡ ಮಣಿ , ಯತಿನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು .


