ಆರ್ಥಿಕವಾಗಿ ಹಿಂದುಳಿದ ಮತ್ತು ನಾನಾ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದ ಗ್ರಾಮೀಣ ಪ್ರತಿಭಾವಂತ ಹುಡುಗರಿಗೆ ಶಿಕ್ಷಣಕ್ಕೆ ನೆರವಾಗುವನ್ವಯ ರಾಮಕೃಷ್ಣ ತಪೋವನ ಬಾಲಕಾಶ್ರಮವು ಅರ್ಜಿ ಆಹ್ವಾನಿಸಿದೆ.

32
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ನೆರೆಯ ಜಿಲ್ಲೆಗಳ, 7 ನೇ ತರಗತಿಯಲ್ಲಿ ಉತ್ತಮ ಶ್ರೇಣಿಯಲ್ಲಿ
ಉತ್ತೀರ್ಣರಾದ ವಿದ್ಯಾರ್ಥಿಗಳು 8ನೇ ತರಗತಿಗೆ ಸೇರಬಹುದು. ಉಚಿತ ಶಿಕ್ಷಣ, ಊಟ ಮತ್ತು ವಸತಿ ಒದಗಿಸಲಾಗುವುದು. ಜೊತೆಗೆ ಭಜನೆ, ಸಂಗೀತ, ಯಕ್ಷಗಾನ, ತೋಟಗಾರಿಕೆ, ಕಂಪ್ಯೂಟರ್, ಶ್ರಮಸೇವೆ, ಭರತನಾಟ್ಯ ಇತ್ಯಾದಿ ತರಬೇತಿ ನೀಡಲಾಗುತ್ತದೆ. ಸುಂದರ ಹಳ್ಳಿಯ ಪರಿಸರದಲ್ಲಿ ಈ ಬಾಲಕಾಶ್ರಮವಿದ್ದು, ಆಸಕ್ತಿಯಿದ್ದ ಹುಡುಗರು 7ನೇ ತರಗತಿಯ ಪರೀಕ್ಷೆ ಮುಗಿದ ಕೂಡಲೇ ವೈಯಕ್ತಿಕ ವಿವರಗಳೊಂದಿಗೆ ದೂರವಾಣಿ ಇಲ್ಲವೆ ಅಂಚೆಯ ಮೂಲಕ ಸಂಪರ್ಕಿಸಬಹುದು. ಬಾಲಕಾಶ್ರಮದ ಪರಿಚಯ- ಮಾಹಿತಿಗಾಗಿ ವಿದ್ಯಾರ್ಥಿಗಳು ಒಂದು ವಾರ ಬಾಲಕಾಶ್ರಮದಲ್ಲಿ ಉಳಿದುಕೊಳ್ಳಬೇಕಾಗುತ್ತದೆ. ಮಕ್ಕಳ ಮೇಲ್ವಿಚಾರಣೆಯನ್ನು ಸ್ವತಃ ಸ್ವಾಮೀಜಿಯವರೇ ವಹಿಸಿಕೊಳ್ಳುವರು.

3
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ-
ರಾಮಕೃಷ್ಣ ತಪೋವನ,
ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬಳಿ,
ಕರಿಯಂಗಳ ಗ್ರಾಮ, ಪೊಳಲಿ ಅಂಚೆ,¸
ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ- 574 219
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:-
9845165108, 0824-2016455, 2266655

By suddi9

Leave a Reply

Your email address will not be published. Required fields are marked *